15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಾಂಗ್ರೆಸ್ಸಿಗೆ ತಕ್ಕಪಾಠ ಕಲಿಸಲು ಯಡಿಯೂರಪ್ಪ ಮನವಿ

ದಾವಣಗೆರೆ: ಉಪ ಚುನಾವಣೆ ನಡೆಯುತ್ತಿರುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತ ವೈಖರಿ ಬಗ್ಗೆ ಜನರು ಬೇಸತ್ತಿದ್ದಾರೆ. ಅವರಿಗೆ ಅಜೀರ್ಣ ಆಗುವಷ್ಟು ಬಹುಮತ ಇದೆ. ಬದಲಾವಣೆ ತರುವ ಕಾತುರತೆಯಲ್ಲಿ ಇರುವ ರಾಜ್ಯದ ಜನತೆ, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಎರಡೂ ಕ್ಷೇತ್ರಗಳ ಮತದಾರರಲ್ಲಿ ಕೈ ಜೋಡಿಸಿ ವಿನಂತಿಸುವುದಾಗಿ ಹೇಳಿದರು.
ಕಾಂಗ್ರೆಸ್ಸಿನವರ ವಿಶ್ವಾಸದ್ರೋಹವು ಮುಸ್ಲಿಮರಿಗೆ ಮನವರಿಕೆ ಆಗಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಮುಸ್ಲಿಂ ಬಂಧುಗಳು ನರೇಂದ್ರ ಮೋದಿಯವರ ಆಡಳಿತವನ್ನು ನೋಡಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಈ ಚುನಾವಣೆಯಲ್ಲಿ ಸೋಲು ನಿಶ್ಚಿತವಾದ ಕಾರಣ ಮುಖ್ಯಮಂತ್ರಿಗಳು ಮನಬಂದಂತೆ ಮಾತನಾಡುತ್ತಾರೆ. ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ಚೆನ್ನಾಗಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ನಮ್ಮ ಅಭ್ಯರ್ಥಿ ಈಗ ತಾನೇ ನಾಮಪತ್ರ ಸಲ್ಲಿಸಿದ್ದು, ಇಲ್ಲಿ ಮತ್ತು ಬಾಗಲಕೋಟೆ ಎರಡೂ ಕಡೆ ದೊಡ್ಡ ಅಂತರದಲ್ಲಿ ನಮ್ಮ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles