15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಒಂದು ಫೋನ್‌ ಕಾಲ್… ಬಳಿಕ ಬರ್ಬರ Haತ್ಯೆ! ಶಿರಸಿಯಲ್ಲಿ ಬೆಚ್ಚಿಬೀಳಿಸಿದ ಘಟನೆ

ಒಂದು ಫೋನ್‌ ಕಾಲ್… ಬಳಿಕ ಬರ್ಬರ Haತ್ಯೆ! ಶಿರಸಿಯಲ್ಲಿ ಬೆಚ್ಚಿಬೀಳಿಸಿದ ಘಟನೆ

ಶಿರಸಿ: ತಾಲೂಕಿನ ಸಿಂಗನಮನೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಯುವಕನೊಬ್ಬ ಕಾಡಿನಲ್ಲಿ ಶ. ವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ. ಪರಮೇಶ್ವರ್ ಬಾಬು ನಾಯ್ಕ (35) ಕೊle ಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ಜೂನ್ 25ರಂದು ಸಂಜೆ ಸುಮಾರು 7.45ರ ವೇಳೆಗೆ ಪರಮೇಶ್ವರ್ ಅವರ ಮೊಬೈಲ್‌ಗೆ ಕರೆ ಬಂದಿತ್ತು. ಕರೆ ಸ್ವೀಕರಿಸಿದ ಬಳಿಕ ಅವರು ಮನೆಯಿಂದ ಹೊರಗೆ ತೆರಳಿದ್ದು, ರಾತ್ರಿ ತಡವಾದರೂ ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮಧ್ಯರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿ (ERSS)ಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ದೊರೆಯುತ್ತಿದ್ದಂತೆಯೇ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ ಜೂನ್ 26ರ ಬೆಳಿಗ್ಗೆ ಪರಮೇಶ್ವರ್ ಅವರ ಮನೆಯಿಂದ ಸುಮಾರು 200 ಮೀಟರ್ ದೂರದ ಕಾಡಿನಲ್ಲಿ ಅವರ ಮೃ. ತದೇಹ ಪತ್ತೆಯಾಯಿತು. ಮೃತದೇಹದ ಮೇಲೆ ತೀವ್ರ ಗಾಯಗಳಿದ್ದು, ಮೇಲ್ನೋಟಕ್ಕೆ ಬರ್ಬರವಾಗಿ Ha ತ್ಯೆ ಮಾಡಿರುವುದು ಕಂಡುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಡಿ.ಎಸ್.ಪಿ ಗೀತಾ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದರು. ತನಿಖೆಗೆ ಕಾರವಾರದ ಶ್ವಾನದಳ, ವಿಧಿವಿಜ್ಞಾನ ತಜ್ಞರು ಹಾಗೂ ಬೆರಳಚ್ಚು ತಜ್ಞರ ಸಹಾಯ ಪಡೆದು ಸ್ಥಳದಲ್ಲಿನ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಲಾಯಿತು.

ಮೃ. ತ ಪರಮೇಶ್ವರ್ ಅವರಿಗೆ ಪತ್ನಿ, ಇಬ್ಬರು ಮಕ್ಕಳು ಹಾಗೂ ತಾಯಿ ಇದ್ದಾರೆ. ಮೃ. ತರ ಮಾವ ನೀಡಿದ ದೂರಿನ ಮೇರೆಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ Koಲೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಸಂಶಯಾಸ್ಪದ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದ ಹಿಂದಿನ ನಿಖರ ಕಾರಣ ಇನ್ನಷ್ಟೇ ತನಿಖೆಯಿಂದ ಬಹಿರಂಗವಾಗಬೇಕಿದ್ದು, ಅನೈತಿಕ ಸಂಬಂಧದ ಶಂಕೆಯೂ ತನಿಖೆಯ ಒಂದು ಆಯಾಮವಾಗಿ ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ. ಆದರೆ ಈ ಕುರಿತು ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., “ಪ್ರಕರಣದ ತನಿಖೆ ವೇಗವಾಗಿ ನಡೆಯುತ್ತಿದೆ. ಕೆಲವು ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles