24.4 C
New York
Wednesday, September 30, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕನ್ನಡ-ಸಂಸ್ಕೃತಿ ಇಲಾಖೆಯಿಂದ ಸಂಗೀತ ಕಾರ್ಯಕ್ರಮ

ಕಲೆ-ಸಂಸ್ಕೃತಿಗೆ ಭವ್ಯ ಇತಿಹಾಸ: ಯುವಪೀಳಿಗೆಗೆ ಪರಂಪರೆ ಪರಿಚಯ ಅಗತ್ಯ:
ಕುಷ್ಟಗಿ: ಶಾಖಾಪುರ ನಗರದ ಸಂಗೀತ ಪರಂಪರೆ ಮಹೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಚಾಮನೂರು ಜೈನಪುರ ಅವರು ಮಾತನಾಡಿ, “ಕಲೆ ಮತ್ತು ಸಂಸ್ಕೃತಿ ನಮ್ಮ ಸಮಾಜದ ಅಮೂಲ್ಯ ಪರಂಪರೆಯಾಗಿದ್ದು, ಇಂದಿನ ಯುವಪೀಳಿಗೆಗೆ ನಮ್ಮ ಸಂಸ್ಕೃತಿಯ ಮೌಲ್ಯಗಳನ್ನು ಪರಿಚಯಿಸುವುದು ಅತ್ಯಂತ ಅಗತ್ಯವಾಗಿದೆ” ಎಂದು ಹೇಳಿದರು.
ನಗರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ–ಸಂಸ್ಕೃತಿ ಉಳಿವಿಗೆ ಪ್ರತಿಯೊಬ್ಬರೂ ಮುಂದಾಗಬೇಕಿದ್ದು, ಜನಪದ ಕಲೆಗಳು ಹಾಗೂ ಸ್ಥಳೀಯ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಅಭಿಪ್ರಾಯಪಟ್ಟರು. ಇಂದಿನ ಯಾಂತ್ರಿಕ ಜೀವನದಲ್ಲಿ ಸಂಸ್ಕೃತಿ ಚಟುವಟಿಕೆಗಳ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ, ಸಮಾಜದಲ್ಲಿ ಕಲೆ–ಸಂಸ್ಕೃತಿಯ ಮಹತ್ವದ ಕುರಿತು ಅಭಿಪ್ರಾಯ ಹಂಚಿಕೊಂಡರು. ಯುವಜನರು ತಮ್ಮ ಮೂಲ ಸಂಸ್ಕೃತಿಯನ್ನು ಅರಿತುಕೊಂಡು ಅದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು ಎಂದು ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು, ಕಲಾವಿದರು, ಸಮಾಜ ಸೇವಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜನಪದ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆ ಕುರಿತು ವಿಶೇಷ ಉಪನ್ಯಾಸಗಳು ನಡೆಯಿತು.
ಅಂತಿಮವಾಗಿ ಸಂಘಟಕರಿಂದ ಅತಿಥಿಗಳಿಗೆ ಸನ್ಮಾನಿಸಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles