16.4 C
New York
Tuesday, September 29, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಬಲಂ’ ಟ್ರೈಲರ್ ಬಿಡುಗಡೆ: ಅದ್ದೂರಿ ಸಮಾರಂಭದಲ್ಲಿ ಚಿತ್ರತಂಡಕ್ಕೆ ಗಣ್ಯರ ಶುಭ ಹಾರೈಕೆ

ಬೆಂಗಳೂರು: ಸಿ.ಪಿ. ಯೋಗೇಶ್ವರ್ ಅವರ ಸುಪುತ್ರ, ನಟ ದ್ಯಾನ ಯೋಗೇಶ್ವರ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ‘ಕರ್ನಾಟಕ ಬಲಂ’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಇಂದು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ವೇಳೆ ಮಾತನಾಡಿದ ಅವರು, “ಹೊಸಬರ ಪ್ರಯತ್ನಕ್ಕೆ ಎಲ್ಲರೂ ಸಾಥ್ ನೀಡಬೇಕು. ‘ಕರ್ನಾಟಕ ಬಲಂ’ ಚಿತ್ರದ ಟ್ರೈಲರ್ ಅತ್ಯಂತ ಆಕರ್ಷಕವಾಗಿದ್ದು, ಚಿತ್ರವು ಭರ್ಜರಿ ಯಶಸ್ಸು ಕಾಣಲಿ” ಎಂದು ಹಾರೈಸಿದರು.

ಗಣ್ಯರ ಮೆರುಗು:
ಈ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ವಿಶೇಷ ಅತಿಥಿಯಾಗಿ ಪಾಲ್ಗೊಂಡು ಚಿತ್ರತಂಡವನ್ನು ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು, ಹಿರಿಯ ನಟ ಹಾಗೂ ಸಂಗೀತ ನಿರ್ದೇಶಕ ಸಾಧು ಕೋಕಿಲ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಉಪಸ್ಥಿತರಿದ್ದರು.

ಜೊತೆಗೆ ಶಾಸಕ ಉದಯಕುಮಾರ್, ತೆಲಂಗಾಣದ ಶಾಸಕ ಮೇಗಾರೆಡ್ಡಿ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಸೇರಿದಂತೆ ರಾಜಕೀಯ ಹಾಗೂ ಚಿತ್ರರಂಗದ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡು ನಟ ದ್ಯಾನ ಯೋಗೇಶ್ವರ್‌ಗೆ ಅಭಿನಂದನೆ ಸಲ್ಲಿಸಿದರು.

‘ಕರ್ನಾಟಕ ಬಲಂ’ ಚಿತ್ರದ ಟ್ರೈಲರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles