16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಲಬುರ್ಗಿಯಲ್ಲಿ ಇಂಡಿಯನ್ ನ್ಯಾಷನಲ್ ಭೀಮ ಆರ್ಮಿಯ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ: ಸಂಘಟನೆ ಬಲಪಡಿಸಲು ನಿರ್ಧಾರ

ಕಲಬುರ್ಗಿ:ನಗರದ ಐವಾನ್-ಇ-ಶಾಹಿ ಪ್ರವಾಸಿ ಮಂದಿರದಲ್ಲಿ ಜುಲೈ 3, 2026ರಂದು ಇಂಡಿಯನ್ ನ್ಯಾಷನಲ್ ಭೀಮ ಆರ್ಮಿಯ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ರಾಜ್ಯಾಧ್ಯಕ್ಷರಾದ ದೀಲಿಪಕುಮಾರ್ ವರ್ಮಾ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಸಂಘಟನೆಯನ್ನು ಜಿಲ್ಲೆಯಾದ್ಯಂತ ವಿಸ್ತರಿಸುವ ಕುರಿತು ಗಂಭೀರ ಚರ್ಚೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ದೀಲಿಪಕುಮಾರ್ ವರ್ಮಾ, “ಕಲಬುರ್ಗಿ ಜಿಲ್ಲೆಯ ಎಲ್ಲಾ 11 ತಾಲೂಕುಗಳಲ್ಲಿಯೂ ಇಂಡಿಯನ್ ನ್ಯಾಷನಲ್ ಭೀಮ ಆರ್ಮಿಯನ್ನು ತಳಮಟ್ಟದಿಂದ ಸಂಘಟಿಸಿ, ಬಲಪಡಿಸಬೇಕು” ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

ಕಳೆದ ಒಂದು ವರ್ಷದಿಂದ ಸಂಘಟನೆಯು ನಡೆಸುತ್ತಿರುವ ಜನಪರ ಹೋರಾಟಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ದಲಿತರು, ರೈತರು, ಮಹಿಳೆಯರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಭೀಮ ಆರ್ಮಿಯು, ಸಾಮಾಜಿಕ ಅನ್ಯಾಯಕ್ಕೊಳಗಾದವರಿಗೆ ಹಾಗೂ ದೌರ್ಜನ್ಯಕ್ಕೆ ತುತ್ತಾದವರಿಗೆ ಸಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ಸಭೆಯಲ್ಲಿ ಹರ್ಷ ವ್ಯಕ್ತಪಡಿಸಲಾಯಿತು.

ಈ ಸಭೆಯಲ್ಲಿ ಕಲಬುರ್ಗಿ ಜಿಲ್ಲೆಯ ಉಪಾಧ್ಯಕ್ಷರಾದ ಆಕಾಶ್ ಆರ್. ಜೆ., ಲೋಕೇಶ್ ಐನೊಳ್ಳಿ, ಸಂಘಟನಾ ಕಾರ್ಯದರ್ಶಿ ವೆಂಕಟ್ ವಾಡಿಕರ್, ಸದಸ್ಯರಾದ ಅನಿಕೇತನ್ ವಾದ್ರಿ, ಮಹಮ್ಮದ್ ಆಸಿಫ್, ಬಸವರಾಜ್ ಸೇರಿದಂತೆ ಹಲವು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles