16 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಲ್ಯಾಣ ಕರ್ನಾಟಕದ ದಲಿತ ಧ್ವನಿ ಆರ್. ರುದ್ರಯ್ಯ ಬಿಜೆಪಿಯ ರಾಜ್ಯ ಕಾರ್ಯಕಾರಣಿಗೆ ಆಯ್ಕೆ

ಕಲ್ಯಾಣ ಕರ್ನಾಟಕದ ದಲಿತ ಧ್ವನಿ ಆರ್. ರುದ್ರಯ್ಯ ಬಿಜೆಪಿಯ ರಾಜ್ಯ ಕಾರ್ಯಕಾರಣಿಗೆ ಆಯ್ಕೆ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ದಲಿತ ಮುಖಂಡರಾದ ಆರ್. ರುದ್ರಯ್ಯ ಅವರು ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕರ್ನಾಟಕ ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಹಿನ್ನೆಲೆ:
ನಿವೃತ್ತ ಕೆ.ಎ.ಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಆರ್. ರುದ್ರಯ್ಯ ಅವರು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ದಲಿತ ಸಮುದಾಯದ ಪ್ರಬಲ ನಾಯಕರಾದ ಇವರು, ಈ ದಲಿತ ಸಮುದಾಯದ ಅಭಿವೃದ್ಧಿ ಮಾಡುವ ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿದ್ದಾರೆ. ಆಡಳಿತಾತ್ಮಕ ಅನುಭವ ಹಾಗೂ ಸಾಮಾಜಿಕ ಬದ್ಧತೆಯನ್ನು ಗಮನಿಸಿ ಪಕ್ಷವು ಇವರಿಗೆ ಈ ಪ್ರಮುಖ ಜವಾಬ್ದಾರಿಯನ್ನು ನೀಡಿದೆ.

ಅಭಿನಂದನೆಗಳ ಮಹಾಪೂರ:
ರುದ್ರಯ್ಯ ಅವರ ಆಯ್ಕೆಯಿಂದ ಕಲಬುರ್ಗಿ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ದಲಿತ ಜನಾಂಗದ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ. ಜಿಲ್ಲೆಯ ಅಭಿವೃದ್ಧಿ ಹಾಗೂ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಇವರ ದಕ್ಷ ನಾಯಕತ್ವಕ್ಕೆ ಇದು ಸಂದ ಜಯ ಎಂದು ಅಭಿಮಾನಿಗಳು ಶ್ಲಾಘಿಸಿದ್ದಾರೆ.

ಪಕ್ಷದ ವರಿಷ್ಠರು ಹಾಗೂ ರಾಜ್ಯ ಘಟಕದ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನಾಯಕತ್ವದಲ್ಲಿ ರುದ್ರಯ್ಯ ಅವರು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಿದ್ದಾರೆ ಎಂಬ ವಿಶ್ವಾಸವನ್ನು ಬೆಂಬಲಿಗರು ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕಲಬುರ್ಗಿಯ ಸಮಸ್ತ ನಾಗರಿಕರು ಹಾಗೂ ದಲಿತ ಜನಾಂಗದ ವತಿಯಿಂದ ಆರ್. ರುದ್ರಯ್ಯ ಅವರಿಗೆ ನಮ್ಮ‌ವಾಹಿನಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles