15.1 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಾವೇರಿ ನೀರು ಹಂಚಿಕೆ ವಿವಾದ: ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಬೆಂಗಳೂರು:
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ರಾಜ್ಯದ ಮುಂದಿನ ಹೆಜ್ಜೆಗಳ ಕುರಿತು ಗಂಭೀರ ಚರ್ಚೆ ನಡೆಸಿದರು.
ಸಭೆಯಲ್ಲಿ ಕಾವೇರಿ ಪ್ರಾಧಿಕಾರದ ಆದೇಶದಿಂದ ರಾಜ್ಯದ ಮೇಲಾಗುವ ಪರಿಣಾಮಗಳು ಮತ್ತು ಕಾನೂನಾತ್ಮಕ ಹೋರಾಟದ ರೂಪುರೇಷೆಗಳ ಬಗ್ಗೆ ಸಮಾಲೋಚನೆ ನಡೆಯಿತು. ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರು:

ಸಚಿವರು: ಡಾ. ಜಿ. ಪರಮೇಶ್ವರ, ರಾಮಲಿಂಗಾ ರೆಡ್ಡಿ.

ಹಿರಿಯ ಅಧಿಕಾರಿಗಳು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಗೌರವ್ ಗುಪ್ತಾ, ರಾಜೇಶ್ ಕುಮಾರ್ ಕಠಾರಿಯ, ಡಿಜಿಪಿ ಸಲೀಂ ಅಹ್ಮದ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles