15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಿತ್ತೂರು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಚನ್ನಮ್ಮನ ಕಿತ್ತೂರು: ತೃತೀಯ ಕಿತ್ತೂರು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಚನ್ನಮ್ಮನ ಕಿತ್ತೂರು ಕನ್ನಡ
ಸಾಹಿತ್ಯ ಪರಿಷತ್ತಿನ ತೃತೀಯ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಶಂಕರ ಚಂದರಗಿ ಸಭಾ ಭವನದಲ್ಲಿ ಜರುಗಿತು.
ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಅಧ್ಯಕ್ಷ ಡಾ. ಎಸ್. ಬಿ. ದಳವಾಯಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಾಲಿ ಪದಾಧಿಕಾರಿಗಳ ಅವಧಿ ಯಲ್ಲಿಯೇ ಮತ್ತೊಂದು ಸಾಹಿತ್ಯ ಸಮ್ಮೇಳನ ಆಯೋಜಿಸುವ ಬಗ್ಗೆ ಚರ್ಚೆ ನಡೆದಿದ್ದು, ಗ್ರಾಮೀಣ ನೆಲೆಯಲ್ಲಿ ಸಾಹಿತ್ಯವನ್ನು ನಿರಂತರ ವಾಗಿ ಜೀವಂತವಾಗಿರಿಸುವ ಕಾರ್ಯ ಕಸಾಪದಿಂದ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಬೆಳಗಾವಿ ಜಿಲ್ಲಾ ಕಸಾಪ ಪ್ರತಿನಿಧಿ ಡಾ. ಜಗದೀಶ ಹಾರುಗೊಪ್ಪ ಮಾತನಾಡಿ, ಈ ಭಾಗದ ಅನೇಕ ಸಾಹಿತಿಗಳು ಮೂಲತಃ ಕೃಷಿಕರಾಗಿರುವುದರಿಂದ, ರೈತರ ಬದುಕಿಗೆ ಸಾಹಿತ್ಯದ ಮೂಲಕ ಚಿಂತನೆ ನೀಡುವ ಉದ್ದೇಶದಿಂದ ಈ ಸಮ್ಮೇಳನದಲ್ಲಿ ಕೃಷಿ ಚಿಂತನೆ ಕುರಿತ ವಿಶೇಷ ಸಂವಾದವನ್ನು ಆಯೋಜಿ ಸಲಾಗಿದೆ. ಬೆಂಗಳೂರಿನ ಖ್ಯಾತ ಚಿಂತಕ ಡಾ. ಬಿ. ಎಂ. ನಾಗಭೂಷಣ ಈ ಸಂವಾದದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮಿಗಳು ಆಶೀರ್ವಚನ ನೀಡಿದರು. ನಿವೃತ್ತ ಶಿಕ್ಷಕ ಎಂ. ಎಸ್. ಕಲ್ಮಠ, ಕಸಾಪ ಗೌರವ ಕಾರ್ಯದರ್ಶಿ ಮಂಜುನಾಥ ಕಳಸಣ್ಣವರ, ನವೋದಯ ತರಬೇತುದಾರರ ಸಂಘದ ಅಧ್ಯಕ್ಷ ಶಿವಾನಂದ ಮಾವಿನಕೊಪ್ಪ ಸದಸ್ಯರಾದ ಕುಮಾರ ಪರದೇಶಿ, ಕ್ಯೂರೇಟರ್ ರಾಘವೇಂದ್ರ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಶಿಕ್ಷಕ ವಿವೇಕ ಕುರಗುಂದ ನಿರೂಪಿಸಿ, ಗೌರವ ಕೋಶಾಧ್ಯಕ್ಷ ಮಹೇಶ್ವರ ಹೊಂಗಲ ವಂದಿಸಿದರು.

ವರದಿಗಾರರು : ಹನಮಂತ ಬಿರಾದಾರಪಾಟೀಲ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles