15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಿತ್ತೂರ ಉತ್ಸವ ಒಳಗಾಗಿ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ನಾಮಕರಣಕ್ಕೆ ಮನವಿ;ರಾಣಿ ಚನ್ನಮ್ಮ ನವಭಾರತ ಸೇನೆ…

ಚನ್ನಮ್ಮನ ಕಿತ್ತೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರು ಬದಲಾವಣೆ ಮಾಡಿ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡಬೇಕು ಎಂದು ಹಲವು ಬಾರಿ ರಾಣಿ ಚನ್ನಮ್ಮ ನವಭಾರತ ಸೇನೆ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಸರ್ಕಾರ ಮಾತ್ರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರು ಮತ್ತು ಶಾಸಕರಾದ ರಾಜು ಕಾಗೆ ಅವರು ಸರ್ಕಾರಕ್ಕೆ ಹಲವು ಬಾರಿ ಒತ್ತಾಯ ಮಾಡಿದ್ದಾರೆ. ಸರ್ಕಾರಕ್ಕೆ ಮತ್ತು ಜನಪ್ರತಿನಿಧಿಗಳಿಗೆ ಚನ್ನಮ್ಮನ ಮತ್ತು ಇತಿಹಾಸ ನೆನಪು ಆಗುವುದು ಕಿತ್ತೂರು ಉತ್ಸವ ಬಂದಾಗ ಮಾತ್ರ ನಿಮ್ಮಗೆ ನೆನಪು ಆಗುತ್ತೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಬೆಳಗಾವಿಗೆ ಬಂದಾಗ ಇನ್ನೂ ಕೆಲವೇ ದಿನಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಹೆಸರು ನಾಮಕರಣ ಮಾಡುತ್ತೇವೆ ಎಂದು ಭರವಸೆ ನೀಡಿದರು. ಆ ಭರವಸೆ ಎಲ್ಲಿ ಹೊತ್ತು ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಇದಿಯಾ ಮಹಾನ ಹೋರಾಟಗಾರ್ತಿ ಹೆಸರು ನಾಮಕರಣ ಮಾಡುವುದಕ್ಕೆ ಯಾಕೆ ಹಿಂದೇಟು ಹಾಕುತ್ತಿದ್ದಿರಿ ಎಂದು ಜನಪ್ರತಿನಿಧಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಹಾಗೂ ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಎಚ್ಚರಿಸಿದರು.


ಕಿತ್ತೂರು ಉತ್ಸವ ಒಳಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರು ಬದಲಾವಣೆ ಮಾಡಿ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಹೆಸರು ನಾಮಕರಣ ಮಾಡಬೇಕು ಇಲ್ಲದಿದ್ದರೆ ಅಕ್ಟೋಬರ್ ನಲ್ಲಿ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಬಸ್ಸುಗಳಿಗೆ ಪೊಸ್ಟರ್ ಹಚ್ಚುತ್ತೇವೆ ಎಂದು ರಾಣಿ ಚನ್ನಮ್ಮ ನವಭಾರತ ಸೇನೆ ರಾಜ್ಯ ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪತ್ರಿಕಾ ವರದಿಯಲ್ಲಿ ತಿಳಿಸಿದರು.

ಸಂಪಾಧಕರು: ರಾಮಚಂದ್ರಪ್ಪ ಪೂಜೇರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles