15.4 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ನಿಯೋಗವು ಒತ್ತಾಯಿಸಿದೆ. ಈ ಸಂಬಂಧ ಮನವಿ ಸಲ್ಲಿಸಿ ಆಗ್ರಹಿಸಿದೆ.
ಈ ಹಗರಣವು ಕರ್ನಾಟಕದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ನಂಬಿಕೆಗೆ ದೊಡ್ಡ ಆಘಾತ ನೀಡಿವೆ. ಇಂತಹ ಸಂದರ್ಭದಲ್ಲಿ ಕೆಪಿಎಸ್‍ಸಿಯೇ ತನ್ನ ವಿರುದ್ಧದ ಆರೋಪಗಳನ್ನು ಆಂತರಿಕವಾಗಿ ತನಿಖೆ ನಡೆಸುವುದರಿಂದ ಸತ್ಯ ಹೊರಬರುವುದಿಲ್ಲ; ಸಾರ್ವಜನಿಕರ ವಿಶ್ವಾಸವೂ ಮೂಡುವುದಿಲ್ಲ ಎಂದು ಮನವಿ ತಿಳಿಸಿದೆ.

ಈ ನಿಟ್ಟಿನಲ್ಲಿ ಇಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ಅವರೊಂದಿಗೆ ಕೆಪಿಎಸ್‍ಸಿ ಕಾರ್ಯದರ್ಶಿಯವರನ್ನು ಭೇಟಿ ಮಾಡಿ, ಈ ಆಂತರಿಕ ತನಿಖೆಯನ್ನು ತಕ್ಷಣವೇ ರದ್ದುಗೊಳಿಸಲು ಒತ್ತಾಯಿಸಲಾಯಿತು. ಅಲ್ಲದೇ, ಪ್ರಕರಣವನ್ನು ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಇದು ಕೇವಲ ಒಂದು ನೇಮಕಾತಿಯ ಪ್ರಶ್ನೆಯಲ್ಲ. ತಮ್ಮ ಜೀವನದ ಅಮೂಲ್ಯ ವರ್ಷಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಮೀಸಲಿಟ್ಟಿರುವ ಲಕ್ಷಾಂತರ ಯುವಕರ ಕನಸು, ಪರಿಶ್ರಮ ಮತ್ತು ನ್ಯಾಯಯುತ ಹಕ್ಕಿನ ಪ್ರಶ್ನೆಯಾಗಿದೆ. ವಿಶ್ವಾಸಾರ್ಹತೆ ಇಲ್ಲದ ಕಾಟಾಚಾರದ ತನಿಖೆಯಿಂದ ಯಾರಿಗೂ ಪ್ರಯೋಜನವಿಲ್ಲ. ಕೆಪಿಎಸ್‍ಸಿಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸಲು ಸಂಪೂರ್ಣ ಸ್ವತಂತ್ರ ತನಿಖೆಯೊಂದೇ ಮಾರ್ಗ ಎಂದು ತಿಳಿಸಲಾಯಿತು.

ಉದ್ಯೋಗಾಕಾಂಕ್ಷಿ ಯುವಜನರ ಹಕ್ಕುಗಳಿಗಾಗಿ ನಮ್ಮ ಹೋರಾಟ ನಿರಂತರ ಎಂದು ಛಲವಾದಿ ನಾರಾಯಣಸ್ವಾಮಿ ಮತ್ತು ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles