16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕೈಗೆ ಸಿಗದ ಗೃಹಲಕ್ಷ್ಮಿ ಹಣ: ಅಂಗವಿಕಲ ಫಲಾನುಭವಿಯ ಏಕಾಂಗಿ ಹೋರಾಟ


ಹಾಬಲಕಟ್ಟಿ:
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಸಿಗಬೇಕಾದ ಹಣ ಸಮರ್ಪಕವಾಗಿ ದೊರೆಯದೆ, ಹಾಬಲಕಟ್ಟಿ ಗ್ರಾಮದ ಅಂಗವಿಕಲ ಫಲಾನುಭವಿ ಶ್ರೀಮತಿ ಶಿಲ್ಪಾ ಶರಣಪ್ಪ ಭೋವಿ ಅವರು ಸಮಸ್ಯೆ ಎದುರಿಸುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ತಮಗೆ ಬರಬೇಕಾದ ಹಣವನ್ನು ಪಡೆಯಲು ಹಲವು ಬಾರಿ ಪ್ರಯತ್ನಿಸಿದರೂ ಹಣ ಕೈಗೆ ಸಿಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಅಂಗವಿಕಲರಾಗಿರುವ ತಮ್ಮಂತಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯಬೇಕು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ, ತಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಶಿಲ್ಪಾ ಭೋವಿ ಮನವಿ ಮಾಡಿದ್ದಾರೆ.
ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅರ್ಹ ಫಲಾನುಭವಿಗೆ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles