17.8 C
New York
Tuesday, September 29, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕ್ಲಸ್ಟರ್ ತರಬೇತಿ ಕಾರ್ಯಕ್ರಮಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ,.

ಕ್ಲಸ್ಟರ್ ತರಬೇತಿ ಕಾರ್ಯಕ್ರಮ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ,. ಬೆಂಗಳೂರು. ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ,. ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.,ಹುಣಸಗಿ ಇವರುಗಳ ಸಂಯುಕ್ತಾಕ್ಷರದಲ್ಲಿ ಕ್ಲಸ್ಟರ್ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಸಹಕಾರ ಸಂಘಗಳು ಅಬಲ ವರ್ಗದ ಜನರ ಆರ್ಥಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹಾಗೂ ಸಹಕಾರ ಸಂಘ ಸಂಸ್ಥೆಗಳು ಇಂದು ಜೀವನದ ಎಲ್ಲಾ ಆಯಾಮಗಳನ್ನು ಆವರಿಸಿಕೊಂಡಿದೆ ಇಂತಹ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಸಂಘ ಸಂಸ್ಥೆಗಳ ಸದಸ್ಯರಿಗೆ ಕೌಶಲ್ಯ ತರಬೇತಿ ಹೆಚ್ಚಿಸುವ ಜೊತೆಗೆ ಹೊಸದಾಗಿ ಬಂದ ನಿರ್ದೇಶಕರಿಗೂ ಹಾಗೂ ಸಂಘದ ಸದಸ್ಯರಿಗೂ ಸಹಕಾರಿ ವ್ಯವಸ್ಥೆಯ ಕುರಿತು ತರಬೇತಿ ನೀಡುವ ಮೂಲಕ ಗುಣಮಟ್ಟದ ವ್ಯವಸ್ಥೆ ಯಾಗಬೇಕು ಎಂದು ಸಸಿಗೆ ನೀರು ಎರೆಯುವುದರ ಮುಖಾಂತರ ಬಸವರಾಜ ಬಳಿ ಮಾಜಿ ಸಂಘದ ಕಾರ್ಯದರ್ಶಿ ಉದ್ಘಾಟನಾ ಭಾಷಣವನ್ನು ನೆರವೇರಿಸಿದರು ಹಾಗೂ ಸಂಘದ ಅಧ್ಯಕ್ಷತೆಯನ್ನು ಶ್ರೀ ರಾಚಪ್ಪ ರುದ್ರಪ್ಪ ಪಟ್ಟಣಶೆಟ್ಟಿ ಇವರು ವಹಿಸಿದ್ದರು ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಾದ ಉದ್ಯೋಗಿನಿ ಕಿರು ಸಾಲ ಅಲ್ಪಸಂಖ್ಯಾತರ ಪುನರ್ ವಸತಿ ಯೋಜನೆ ಧನಶ್ರೀ ಯೋಜನೆ ಚೇತನ ಯೋಜನೆ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ವಿವಿಧ ಯೋಜನೆಗಳ ಮಹಿಳೆಯರಿಗೆ ಸಿಗುವ ಸಾಲ ಸೌಲಭ್ಯಗಳ ಕುರಿತು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸದಸ್ಯರಿಗೆ ಇಲಾಖೆಯಿಂದ ಸಿಗುವ ಯೋಜನೆಗಳ ಕುರಿತು ವಿಸ್ತಾರವಾಗಿ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು ಶ್ರೀಮತಿ ಶಿವ ಮಂಗಳ ಎಂ ಪ್ರಸನ್ನ ವಿಶೇಷವಾಗಿ ಉಪನ್ಯಾಸ ನೀಡಿದರು, ಹಾಗೂ ಸಹಕಾರ ಚಳುವಳಿ ಹಾಗೂ ಡಿಸಿಎಂ ತರಬೇತಿಯ ಕುರಿತು ಪ್ರಾಸ್ತಾವಿಕವಾಗಿ ಹಾಗೂ ಕಾರ್ಯಕ್ರಮದ ನಿರೂಪಣೆ ಶ್ರೀಮತಿ ಸುಜಾತ ಮಠ ಜಿಲ್ಲಾ ಸಹಕಾರ ಶಿಕ್ಷಕರು ಯಾದಗಿರಿ ಇವರು ನೆರವೇರಿಸಿದರು, ವಂದನಾರ್ಪಣೆಯನ್ನು ಸಂಘದ ಕಾರ್ಯದರ್ಶಿ ವೀರೇಶ್ ಬಳಿ ನೆರವೇರಿಸಿದರು ವಂದನಾರ್ಪಣೆಯನ್ನು ವೀರಪ್ಪಣ್ಣ ವ್ಯವಸ್ಥಾಪಕರು ಜಿಲ್ಲಾ ಸಹಕಾರ ಒಕ್ಕೂಟ ನಿ,.ಯಾದಗಿರಿ ಇವರು ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಬಸನಗೌಡ ಪೋಲಿಸ್ ಪಾಟೀಲ್ ಉಪಸ್ಥಿತರಿದ್ದರು ಹಾಗೂ ಸಂಘದ ಸಿಬ್ಬಂದಿಗಳಾದ ಮಂಜುನಾಥ ಹಾಗೂ ಸಂಘದ ಸರ್ವ ಸದಸ್ಯರು ಮಹಿಳೆಯರು ಉಪಸ್ಥಿತರಿದ್ದರು..

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles