15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕ್ಷೇತ್ರದಾದ್ಯಂತ ಸಂಘಟನೆ ಬಲವರ್ಧನೆ ಹಾಗೂ ಎಸ್‌ಐಆರ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಉದ್ದೇಶದಿಂದ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಹನುಮಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಗೂ ಮುಂಡಗೋಡ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಬಿ.ಎಲ್.ಎ-2ಗಳ ಸಭೆಯನ್ನು ನಡೆಸಿದರು…

ಮುಂಡಗೋಡ, ಜುಲೈ 19: ಕ್ಷೇತ್ರದಾದ್ಯಂತ ಸಂಘಟನೆ ಬಲವರ್ಧನೆ ಹಾಗೂ ಎಸ್‌ಐಆರ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಉದ್ದೇಶದಿಂದ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಹನುಮಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಗೂ ಮುಂಡಗೋಡ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಬಿ.ಎಲ್.ಎ-2 ಗಳ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಎಸ್‌ಐಆರ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸುವ ಕುರಿತು ಶಾಸಕರು ಮಾರ್ಗದರ್ಶನ ನೀಡಿದರು. ಪಕ್ಷದ ಚಟುವಟಿಕೆಗಳನ್ನು ತಳಮಟ್ಟದಲ್ಲಿ ಇನ್ನಷ್ಟು ಚುರುಕುಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿ.ಎಸ್. ಪಾಟೀಲ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಂ. ನಾಯ್ಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶಾರದಾ ರಾಠೋಡ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಹಮ್ಮದ್ ಗೌಸ್ ಮಕಾನದಾರ್, ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೆ.ಸಿ. ಗಲಭಿ, ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಧರ್ಮರಾಜ ನಾಡಿಗೇರ, ಪ್ರಮುಖರಾದ ಡಿ.ಎಫ್. ಮಡ್ಲಿ, ಎನ್.ಎಂ. ದುಂಡಸಿ, ರಜಾ ಫಠಾಣ, ಮಹಿಳಾ ಕಾಂಗ್ರೆಸ್‌ನ ಸಲ್ಮಾ ಶೇರಖಾನೆ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿಗಾರರು: ಬಸಯ್ಯ ತೋಟಯ್ಯನವರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles