16.4 C
New York
Tuesday, September 29, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಸತ್ಯಮಿಥ್ಯ ಸುದ್ದಿಮೂಲ ಗದಗ:

ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ.

ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ತೋಟಪ್ಪ (ರಾಜು) ಕುರಡಗಿ ಅವರು ಈ ಕುರಿತು ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಶರಣಪ್ಪ ಪ್ಯಾಟಿ ಅವರ ನೇಮಕಕ್ಕೆ ಮಾಜಿ ಸಚಿವರಾದ ಶ್ರೀ ಕಳಕಪ್ಪ ಬಂಡಿ, ಪಕ್ಷದ ವಿವಿಧ ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆಗಳನ್ನು ಸಲ್ಲಿಸಿ ಅವರ ಮುಂದಿನ ಸಾಂಸ್ಥಿಕ ಕಾರ್ಯಗಳಿಗೆ ಶುಭ ಹಾರೈಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles