14.7 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಚೆನ್ನಮ್ಮ ದೇವೇಗೌಡರಿಗೆ ಸಿದ್ದರಾಮಯ್ಯ ಅಂತಿಮ ನಮನ; ದೇವೇಗೌಡ ಕುಟುಂಬಕ್ಕೆ ಸಾಂತ್ವನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಭಾವಪೂರ್ಣ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ಹೆಚ್.ಡಿ. ದೇವೇಗೌಡ ಹಾಗೂ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ದುಃಖದ ಈ ಸಂದರ್ಭದಲ್ಲಿ ಧೈರ್ಯದಿಂದ ಇರಬೇಕೆಂದು ಹೇಳಿ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು.

ರಾಜಕೀಯ ಭೇದಗಳನ್ನು ಮೀರಿ ಮಾನವೀಯತೆ ಮತ್ತು ಪರಸ್ಪರ ಗೌರವದ ಸಂಕೇತವಾಗಿ ಸಿದ್ದರಾಮಯ್ಯ ಅವರ ಈ ಭೇಟಿ ಗಮನ ಸೆಳೆದಿದ್ದು, ಹಲವು ಗಣ್ಯರು ಕೂಡ ಚೆನ್ನಮ್ಮ ದೇವೇಗೌಡರಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles