14.6 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ

ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ

ಪ್ರತಿ ತಿಂಗಳ ಮೊದಲ‌ ಹಾಗೂ ಮೂರನೆ ಶನಿವಾರ ಪ್ರಜೆಗಳ ಅಹವಾಲಿಗೆ ಸ್ಪಂದಿಸಿ ಪರಿಹಾರ ಕೊಡಿಸವುದು

ಅಧಿಕಾರಿಗಳು ಕಟ್ಟು ನಿಟ್ಟಾಗಿ ಕೆಲಸ ನಿರ್ವಹಣೆ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕು

ಪ್ರಜಾ ಸೇವಾ ಆಂದೋಲನ ಮೂಲಕ ಜನರ ಬಳಿಗೆ ಸರ್ಕಾರ

ಕಾನೂನು ತೋಡಕಿಲ್ಲದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ:ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ ಜಿಲ್ಲೆ, ಸೆ.05
👇
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರಜಾ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಶಯದಂತೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯದೊಂದಿಗೆ ಪ್ರಜಾ ಸೇವಾ ಇಲಾಖೆ ಅಸ್ತಿತ್ವಕ್ಕೆ ಬಂದಿದೆ. ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ,ಸರ್ಕಾರಿ ಕಚೇರಿಗಳಿಗೆ ‌ಜನರ ಅಲೆದಾಟ ತಪ್ಪಿಸುವ ದೂರದೃಷ್ಟಿಯಿಂದ ಕಾನೂನು ಚೌಕಟ್ಟಿನಲ್ಲಿ ಸ್ಥಳೀಯ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲು ಪ್ರಜಾ ಸೇವಾ ಆಂದೋಲನ ಸಭೆಯನ್ನು ಪ್ರತಿ ಶನಿವಾರ ಹಮ್ಮಿಕೊಳ್ಳಲಾಗುವುದು.

ಬಡವರು, ರೈತರು, ದಲಿತರು, ಮಹಿಳೆಯರ ಪರವಾಗಿ ನಮ್ಮ ಸರ್ಕಾರವಿದ್ದು ರಾಜ್ಯದಲ್ಲಿ ಹೊಸ ಪ್ರಯತ್ನ ಪ್ರಜಾ ಸೇವಾ ಇಲಾಖೆಯಿಂದ ನಡೆಯಲಿದೆ. ಹೋಬಳಿ ಮಟ್ಟದಲ್ಲೂ ಶಾಸಕರ ಅಧ್ಯಕ್ಷತೆಯಲ್ಲಿ ಈ ಆಂದೋಲನ ನಡೆಯಲಿದೆ. ಸಾರ್ವಜನಿಕರು ಪ್ರಜಾ ಸೇವಾ ಆಂದೋಲನಕ್ಕೆ ಸಹಕಾರ ನೀಡಬೇಕು ಎಂದರು.

ಪ್ರಜಾಸೇವಾ ಆಂದೋಲನ ಮೂಲಕ ಕಚೇರಿಗಳಿಗೆ ಅಲೆದಾಡದೆ, ಒಂದೇ ಸೂರಿನಡಿ ತಮ್ಮ ಅರ್ಜಿ, ದೂರು ಹಾಗೂ ಮನವಿಗಳನ್ನು ಸಲ್ಲಿಸಬಹುದಾಗಿದೆ. ಇದರಿಂದ ಅರ್ಜಿಗಳ ವಿಲೇವಾರಿ ತ್ವರಿತವಾಗಿ ಆಗಲಿದೆ ಎಂದರು.

ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಎದುರಾಗುವ ತೊಂದರೆಗಳು, ದಾಖಲೆಗಳ ಸಮಸ್ಯೆಗಳು, ಪಿಂಚಣಿ, ವಸತಿ, ಜಮೀನು, ಪೋಡಿ, ಖಾತೆ ಬದಲಾವಣೆ, ರಸ್ತೆ ಅಭಿವೃದ್ಧಿ, ಪೊಲೀಸ್ ಸೇವೆ, ಗ್ಯಾರಂಟಿ ಯೋಜನೆ, ಕೆರೆ ಅಭಿವೃದ್ಧಿ ಮುಂತಾದ ವಿವಿಧ ಸಾರ್ವಜನಿಕ ಸಮಸ್ಯೆಗಳಿಗೆ ಪ್ರಜಾ ಸೇವಾ ಆಂದೋಲನದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಪ್ರಜಾಸೇವಾ ಅಭಿಯಾನದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಯೋಜನೆಗಳು ಮತ್ತು ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅರ್ಜಿ ಮತ್ತು ದೂರುಗಳನ್ನು ವಿಳಂಬ ಮಾಡದೆ ನಿಯಮಾನುಸಾರ ಪರಿಶೀಲಿಸಿ, ಅರ್ಹ ಪ್ರಕರಣಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಕಾನೂನು ತೊಡಕು ಅರ್ಜಿಗಳು ಸ್ವಲ್ಪ ವಿಳಂಬ ವಾಗಲಿದೆ. ಉಳಿದ ಅರ್ಜಿಗಳ ವಿಲೇವಾರಿ ತ್ವರಿತವಾಗಿ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ವಿತರಣೆ, ವಿಬಿಜಿರಾಂಜಿ ಕಾಯ್ದೆಯಡಿ ಗ್ಯಾರಂಟಿ ಜಾಬ್ ಕಾರ್ಡ್ ವಿತರಣೆ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯಡಿ ಹನಿ ನೀರಾವರಿ ಯೋಜನೆ ಸವಲತ್ತು ವಿತರಣೆ, ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಸವಲತ್ತು ವಿತರಣೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಡಿ.ಸಿ ಡಾ. ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್, ಎಸ್ಪಿ ಚಂದ್ರಕಾಂತ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ನಾರಾಯಣಸ್ವಾಮಿ, ವಿಜಯಪುರ ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್, ಮುಖಂಡರಾದ ಮಂಜುನಾಥ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles