17 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ತೀರಾ ಅಗತ್ಯವಿದ್ದರೆ ಕೊಳವೆ ಬಾವಿ ಕೊರೆಸಿ: ಈಶ್ವರ ಖಂಡ್ರೆ

ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ.ಲಭ್ಯ: ಈಶ್ವರ ಖಂಡ್ರೆ

ಬೆಂಗಳೂರು, ಜು.26: ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ. ಲಭ್ಯವಿದ್ದು, ಹಣಕಾಸಿನ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ 117 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ಘೋಷಿಸಿದ್ದು ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದರು.
ಸಾಂಪ್ರದಾಯಿಕ ಜಲ ಮೂಲ ಬತ್ತಿ ಹೋಗಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರು ಪೂರೈಕೆಗೆ ತೊಡಕಾಗದಂತೆ ಪರ್ಯಾಯ ಜಲ ಮೂಲ ಗುರುತಿಸಲು, ಖಾಸಗಿ ಕೊಳವೆಬಾವಿ, ತೆರೆದ ಬಾವಿ ಬಾಡಿಗೆಗೆ ಪಡೆದು, ನೀರು ಪರೀಕ್ಷಿಸಿ, ಟ್ಯಾಂಕರ್ ಮೂಲಕ ನೀರು ಪೂರೈಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜನರ ಸಂಕಷ್ಟ ಅರಿತು ಕಾರ್ಯ ನಿರ್ವಹಿಸಬೇಕು ಎಂದರು.
ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಿ, ಅದಕ್ಕೆ ಪಂಪ್ ಸೆಟ್ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ಎಂದು ಈಶ್ವರ ಖಂಡ್ರೆ ನಿರ್ದೇಶನ ನೀಡಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles