ನವಲಗುಂದ (ಧಾರವಾಡ): ‘ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ದೇಶದ ಜನಸಂಖ್ಯೆ ಹೆಚ್ಚಾಗಿದೆ ‘ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿದೆ’ ಎಂದರು.
ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಹೊಸ ಬಾಳಿಗೆ ಕಾಲಿಟ್ಟ ವಧು- ವರರು ಆದರ್ಶ ದಂಪತಿಗಳಾಗಬೇಕು ಎಂದು ಹೇಳಿದರು.
‘ಸ್ವಂತ ಉದ್ಯೋಗ ಆರಂಭಿಸಬೇಕು. ಉದ್ಯೋಗದಾತರಾಗಬೇಕು. ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.
ಕುವೆಂಪು ಹೇಳಿದಂತೆ ನಾಡನ್ನು
ಸರ್ವ ಜನಾಂಗದ ಶಾಂತಿಯ ತೋಟವಾಗಿಸುವುದು ನಮ್ಮ ಆಶಯ. ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವಗಳು ನಮ್ಮ ಧ್ಯೇಯ ಎಂದರು.
ಕಾರ್ಯಕ್ರಮದಲ್ಲಿ 75 ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಶಾಸಕ ಎನ್.ಎಚ್.ಕೋನರಡ್ಡಿ ಪುತ್ರ ನವೀನ ಕುಮಾರ್- ಸಹನಾ ಆರತಕ್ಷತೆ ನಡೆಯಿತು.
ಸಚಿವರಾದ ಸಂತೋಷ ಲಾಡ್, ಕೃಷ್ಣ ಬೈರೇಗೌಡ, ಡಾ ಎಚ್.ಸಿ. ಮಹದೇವಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ ಇದ್ದರು.
ಮುಂದಿನ ಪ್ರಶ್ನೆಗಳು
ಸಿದ್ದರಾಮಯ್ಯನವರು ಜನಸಂಖ್ಯೆ ನಿಯಂತ್ರಣದ ಬಗ್ಗೆ ಏನು ಹೇಳಿದರು?
ಅಂತರ್ಜಾತಿ ವಿವಾಹಗಳ ಬಗ್ಗೆ ಸಿದ್ದರಾಮಯ್ಯನವರ ಅಭಿಪ್ರಾಯವೇನು?
ಡಿ.ಕೆ. ಶಿವಕುಮಾರ್ ಅವರು ನವ ವಧು-ವರರಿಗೆ ಏನು ಸಲಹೆ ನೀಡಿದರು?
ಸಿದ್ದರಾಮಯ್ಯನವರು ಸಾಮೂಹಿಕ ವಿವಾಹದ ಕುರಿತು ಏನು ಹೇಳಿದರು

