15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಯುವ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ 

ಬೆಂಗಳೂರು ಜೂ.27: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಸಾವಿಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ) ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.

ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್‌.ಮಂಜುನಾಥ್ ಅವರ ನೇತೃತ್ವದಲ್ಲಿ ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ನೂರಾರು ವಿದ್ಯಾರ್ಥಿಗಳು, ಯುವಕರು ಪಂಜನ್ನು ಹಿಡಿದು, ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮ, ವಿದ್ಯಾರ್ಥಿಗಳ ಕುರಿತ ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ಧೋರಣೆ ಖಂಡಿಸಿ “ವಿದ್ಯಾರ್ಥಿಗಳ ಭವಿಷ್ಯ ಉಳಿಸಿ”, “ಪಾರದರ್ಶಕ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಿ”, “ನೀಟ್ ಅಕ್ರಮ ಕುರಿತು ನ್ಯಾಯಯುತ ತನಿಖೆ ನಡೆಸಿ”, ”ಶಿಕ್ಷಣಕ್ಕೆ ಚಿಕಿತ್ಸೆ ಕೊಡಿ” ಎಂಬ ಘೋಷಣೆಗಳನ್ನು ಮೊಳಗಿಸಿ ಗಮನ ಸೆಳೆದರು.

ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಮಾತನಾಡಿ, ”ಪಾರದರ್ಶಕ, ಭ್ರಷ್ಟಾಚಾರಮುಕ್ತ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ರೂಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ, ಆ ಜವಾಬ್ದಾರಿಯನ್ನು ಮರೆತಿರುವ ಕೇಂದ್ರ ಬಿಜೆಪಿ ನಾಯಕರು 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದ್ದಾರೆ. ಅಲ್ಲದೆ, ನೀಟ್ ಅಕ್ರಮದಿಂದ ನೂರಾರು ವಿದ್ಯಾರ್ಥಿಗಳ ಸಾವಿಗೆ ಕಾರಣರಾಗಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಸಾವಿಗೆ ಕಾರಣರಾದ 
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನ್ಮದಿನದ ಶುಭಾಶಯ ಕೋರಿ, ಶಿಕ್ಷಣ ಕ್ಷೇತ್ರದಲ್ಲಿ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಸಂತಾಪವನ್ನೂ ಸೂಚಿಸದ, ಪಾಪಪ್ರಜ್ಞೆ, ಪಶ್ಚಾತ್ತಾಪ ಇಲ್ಲದ ವ್ಯಕ್ತಿಯ ಕಾರ್ಯ ಶ್ಲಾಘಿಸುವ ಇವರುಗಳಿಗೆ ನಾಚಿಕೆಯಿಲ್ಲವೇ? ಎಂದು ಕಿಡಿಕಾರಿದರು.

”ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೇ ರಾಜಕೀಯ ಲಾಭ ದೊಡ್ಡದಲ್ಲ. ಇದನ್ನು ಮರೆತಿರುವ ಬಿಜೆಪಿ ನಾಯಕರು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಕನಿಷ್ಟ ಸಂತಾಪವನ್ನೂ ಸೂಚಿಸಲು ಮುಂದಾಗುತ್ತಿಲ್ಲ. ಆದರೆ, ಶಿಕ್ಷಣ, ವಿದ್ಯಾರ್ಥಿಗಳು ಹಾಗೂ ಯುವಕರ ಮಹತ್ವ ಅರಿತಿರುವ ರಾಹುಲ್ ಗಾಂಧಿಯವರು ರಾಜಕೀಯೇತರವಾದ ಅಭಿಯಾನದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಿ, ಮೃತ ಆಕಾಂಕ್ಷಿಗಳ ಕುಟುಂಬಕ್ಕೆ ನ್ಯಾಯ ದೊರಕಿಸಲು ಪಣ ತೊಟ್ಟಿದ್ದಾರೆ. ಅದರಂತೆ, ಯುವ ಕಾಂಗ್ರೆಸ್ ಹೋರಾಟ ತಾರ್ಕಿಕ ಅಂತ್ಯ ತಲುಪುವವರೆಗೂ ವಿದ್ಯಾರ್ಥಿಗಳ ಜೊತೆ ನಿಲ್ಲಲಿದೆ,” ಎಂದು ಭರವಸೆ ನೀಡಿದರು.

ಈ ವೇಳೆ ಯುವ ಕಾಂಗ್ರೆಸ್‌ ರಾಷ್ಟ್ರೀಯ ಕಾರ್ಯದರ್ಶಿ ತಾರೀಖ್‌ ಭಾಗವಾನ್‌, ಕಾನೂನು ಘಟಕದ ರಾಜ್ಯಾಧ್ಯಕ್ಷ ಶ್ರೀಧರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಹುಲ್ ಗೌಡ, ದಕ್ಷಿಣ ಜಿಲ್ಲಾಧ್ಯಕ್ಷ ಮೋನೀಶ್ ರೆಡ್ಡಿ, ಪೂರ್ವ ಜಿಲ್ಲಾಧ್ಯಕ್ಷ ರಾಮ್ ನಾಯಕ್ ಸೇರಿದಂತೆ ಇತರರು ಇದ್ದರು.


‘ಛಾತ್ರೋನ್ ಕಿ ಗೂಂಜ್’ ನೀಟ್ ವಿರೋಧಿ ಅಭಿಯಾನದ ಮೊದಲ ವಾರಾಂತ್ಯದಲ್ಲಿ ಪಂಜಿನ ಮೆರವಣಿಗೆ ನಡೆದಿದ್ದು, ಪ್ರತೀ ವಾರಾಂತ್ಯವೂ ಸಂವಾದ ಕಾರ್ಯಕ್ರಮ, ನೀಟ್ ವಿರೋಧಿ ಸಂಗೀತ ಕಛೇರಿ, ಮೋಟಿವೇಷನಲ್ ಸ್ಪೀಚ್(ಪ್ರೇರಕ ಭಾಷಣ) ಹಾಗೂ ವಾಕಥಾನ್ ಸೇರಿದಂತೆ ನಾನಾ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೆ ಅಭಿಯಾನದ ಸ್ವಯಂಸೇವಕರು ಪ್ರತಿ ಕಾಲೇಜು, ವಿಶ್ವವಿದ್ಯಾಲಯದ ಪ್ರತಿ ತರಗತಿಗೆ ತೆರಳಿ ವಿದ್ಯಾರ್ಥಿಗಳ ನೋಂದಣಿ ಮಾಡಿಸುತ್ತಿದ್ದು, 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ ಗುರಿಯನ್ನು ಹೊಂದಲಾಗಿದೆ.
– ಎಚ್.ಎಸ್.ಮಂಜುನಾಥ್, ಕೆಪಿವೈಸಿಸಿ ರಾಜ್ಯಾಧ್ಯಕ್ಷ.

ಸಂಪರ್ಕ:
ದೀಪಕ್ ಗೌಡ: 9606006555
ಪುನೀತ್ ಎ ಆರ್: 7349393474

ಶರದಿ: ಸೋಮಶೇಖರ ಲಮಾಣಿ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles