15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ವಿನಯಕುಮಾರ ಗಣಾಚಾರಿ ಕರೆ

ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ವಿನಯಕುಮಾರ ಗಣಾಚಾರಿ ಕರೆ

ಲಿಂಗಸುಗೂರು: “ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯಪಡದೆ ಆತ್ಮವಿಶ್ವಾಸದಿಂದ ಬರೆಯಬೇಕು. ನಿಮ್ಮ ನಿರಂತರ ಪರಿಶ್ರಮಕ್ಕೆ ಖಂಡಿತವಾಗಿಯೂ ಉತ್ತಮ ಫಲಿತಾಂಶ ಲಭಿಸುತ್ತದೆ” ಎಂದು ಶ್ರೀ ಉಮಾಮಹೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ವಿನಯಕುಮಾರ ಗಣಾಚಾರಿ ಅವರು ತಿಳಿಸಿದರು.

ಪಟ್ಟಣದ ಕರಡಕಲ್ಲ ಶ್ರೀ ಉಮಾಮಹೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಯ ಶ್ರೀ ಜ್ಞಾನಗಂಗಾ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳಿಗೆ ಹೂಗುಚ್ಚ ನೀಡಿ ಶುಭ ಹಾರೈಸಿ ಅವರು ಮಾತನಾಡಿದರು. ಉತ್ತಮ ಅಂಕಗಳನ್ನು ಗಳಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಆಶಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಹಿರೇಮಠ, ಸಂಯೋಜಕ ಸಂಗಯ್ಯ ಸಿಂದಗಿಮಠ, ಪ್ರಮುಖರಾದ ಬಸವರಾಜ ಮರೋಳ, ಮೌನೇಶ ಬಡಿಗೇರ, ಶರಣಬಸವ ಹೂಗಾರ, ದೈಹಿಕ ಶಿಕ್ಷಕ ಮಹಮ್ಮದ್ ಪೈಗಂಬರ ಟೆಂಗುಂಟಿ, ರಾಜು ಮಸ್ಕಿ, ಸಂಗಮೇಶ ಹಿರೇಮಠ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles