14.5 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ನಗರದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಅಡಿಗಲ್ಲು ಸಮಾರಂಭ

ನಗರದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಅಡಿಗಲ್ಲು ಸಮಾರಂಭ

ಯಾದಗಿರಿ : ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ 2025-26ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಅನುಮೋದನೆಗೊಂಡಿರುವ ಹಿನ್ನೆಲೆ ಯಾದಗಿರಿ ನಗರದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಯ ಅಂದಾಜು ಮೊತ್ತ 985 ಲಕ್ಷ ರೂ.ಗಳ ಅಡಿಗಲ್ಲು ಸಮಾರಂಭವನ್ನು 2026ರ ಮಾರ್ಚ್ 2ರ ಸೋಮವಾರ ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಅಡಿಗಲ್ಲು ಕಾರ್ಯಕ್ರಮ ಆಯೋಜಿಸಲಾಗಿದೆ.

 ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಯಾದಗಿರಿ ನಗರದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಯ ಕಾರ್ಯಕ್ರಮ ಅವರ ಘನ ಉಪಸ್ಥಿತಿಯಲ್ಲಿ ನೆರವೇರಲಿದೆ.

 ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

 ಕಲಬುರಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅಜಯಸಿಂಗ್, ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ, ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಬಾಬುರಾವ್ ಚಿಂಚನಸೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರು ಶ್ರೀ ಶರಣಪ್ಪ ಸಲಾದಪೂರ, ಅವರ ಗೌರವ ಉಪಸ್ಥಿತಿಯಲ್ಲಿ ನೆರವೇರಲಿದೆ.

 ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು.

 ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ ಹಾಗೂ ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಭೀಮರಾಯನಗುಡಿ ಕಾಡಾ ಅಧ್ಯಕ್ಷರು ಶ್ರೀ ಬಾಬು ಹೊನ್ನಾ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ಬಾಬುರಾವ್ ಕಾಡ್ಲೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು.

 ಕಲಬುರಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಾದ ಶ್ರೀ ನಳಿನ್ ಅತುಲ್, ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಪೃಥ್ವಿಕ್ ಶಂಕರ್, ಇಂಜಿನೀಯರಿAಗ್ ಘಟಕ ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಅಭಿಯಂತರರು ಮುಕ್ಕಣ್ಣ ನಾಯಕ ಜಿ.ಆರ್, ಯಾದಗಿರಿ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯ ನೋಡಲ್ ಅಧಿಕಾರಿಗಳು ಯಿಮ್ಸ್ ಪಂಪಾರೆಡ್ಡಿ.ಬ.ಕೊಲ್ಲೂರ್ ವಿಶೇಷ ಆಹ್ವಾನಿರಾಗಿ ಪಾಲ್ಗೊಳ್ಳುವರು.

 ಸರ್ವರಿಗೂ ಆದರದ ಸುಸ್ವಾಗತವನ್ನು ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕರು ಡಾ.ಸಂದೀಪ್ ವಿ.ಎಚ್, ಯಾದಗಿರಿ ಯಿಮ್ಸ್ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯ ಪ್ರಾಂಶುಪಾಲರು ಶ್ರೀ ಸಿದ್ರಾಮಪ್ಪ ಸಜ್ಜನ್, ಕಲಬುರಗಿ ವಿಭಾಗ ಆ.ಕು.ಕ.ಇಂ. ಕಾರ್ಯನಿರ್ವಾಹಕ ಅಭಿಯಂತರರು ಶ್ರೀ ಸುನೀಲಕುಮಾರ, ರಾಯಚೂರು ಉಪವಿಭಾಗ ಆ.ಕು.ಕ.ಇಂ. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಶ್ರೀ ಲಕ್ಷಿö್ಮÃನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles