14.9 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರೆತಿರುವಿರಾ..? ಮರಳಿ ಪಡೆಯಲು ಇಲ್ಲಿದೆ ಅವಕಾಶ

ದಿರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಡಿ.09 ರಂದು ಮ.03 ಗಂಟೆಯಿಂದ ಹಾಸನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ.

ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿನ ಹಣ ಮತ್ತು ಕ್ಲೈಮ್ ಮಾಡದ ಠೇವಣಿಗಳನ್ನು ಕ್ಲೈ ಮಾಡಬಹುದು. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ.

ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ, ನೀವು ಅಗತ್ಯ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರವನ್ನು ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಈ ಶಿಬಿರ ಮುಗಿದ ನಂತರವೂ ಸಹ ಸಂಬಂಧಪಟ್ಟ ಬ್ಯಾಂಕ್ ಅಥವಾ ಇತರ ಇಲಾಖೆಗಳಲ್ಲಿ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿನ ಹಣ ಮತ್ತು ಕ್ಲೆöÊಮ್ ಮಾಡದ ಠೇವಣಿಗಳನ್ನು ಕ್ಲೈಮ್ ಮಾಡಬಹುದು.

ಬ್ಯಾಂಕಿನಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಮತ್ತು ಕ್ಲೈಮ್ ಮಾಡದ ಖಾತೆಗಳು ಮತ್ತು ಠೇವಣಿಗಳ ವಿವರಗಳನ್ನು ನೀವು ಆರ್.ಬಿ.ಐ ನ ಯುಡಿಜಿಎಎಂ( ( https://udgam.rbi.org.in ) ನಲ್ಲಿ ಕಂಡು ಹಿಡಿಯಬಹುದು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles