15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ: ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ವೇಗ ನೀಡಲು

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ: ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ವೇಗ ನೀಡಲು ಕಾರ್ಯದರ್ಶಿ ಕನಗವಲ್ಲಿ ಸೂಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡಗಳ ಯುವಜನತೆಯ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಇಲಾಖೆಯ ಪ್ರತಿಯೊಂದು ಯೋಜನೆಯೂ ಅರ್ಹ ಫಲಾನುಭವಿಗಳಿಗೆ ತಲುಪುವ ಮೂಲಕ ಸಮುದಾಯದಲ್ಲಿ ಧನಾತ್ಮಕ ಬದಲಾವಣೆ ತರಬೇಕು ಎಂದು ಅವರು ಒತ್ತಿ ಹೇಳಿದರು.

ಸಭೆಯ ಮುಖ್ಯಾಂಶಗಳು:
ಶೈಕ್ಷಣಿಕ ಪ್ರಗತಿಗೆ ಆದ್ಯತೆ: ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ಗುಣಮಟ್ಟದ ಆಹಾರ ಮತ್ತು ವಿದ್ಯಾರ್ಥಿವೇತನ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕೌಶಲ್ಯಾಭಿವೃದ್ಧಿಗೆ ಒತ್ತು: ಎಸ್‌ಟಿ ಸಮುದಾಯದ ಯುವಕ-ಯುವತಿಯರಿಗೆ ಉದ್ಯೋಗದಕ್ಷತೆ ಹೆಚ್ಚಿಸಲು ಅಗತ್ಯವಿರುವ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಆದ್ಯತೆ ನೀಡಬೇಕು.
ಕಾಲಮಿತಿಯೊಳಗೆ ಅನುಷ್ಠಾನ: ಅನುದಾನದ ಬಳಕೆ ಮತ್ತು ಯೋಜನೆಗಳ ಭೌತಿಕ ಪ್ರಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ, ನಿಗದಿತ ಸಮಯದೊಳಗೆ ಗುರಿ ತಲುಪಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕ್ಷೇತ್ರ ಭೇಟಿ: ಜಿಲ್ಲಾಮಟ್ಟದ ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತವಾಗದೆ, ಕ್ಷೇತ್ರ ಭೇಟಿ ನೀಡಿ ಯೋಜನೆಗಳ ನೈಜ ಸ್ಥಿತಿಗತಿಯನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಯಿತು.

ಗಣ್ಯರ ಉಪಸ್ಥಿತಿ:
ಸಭೆಯಲ್ಲಿ ಇಲಾಖೆಯ ನಿರ್ದೇಶಕರಾದ ಶ್ರೀ ಟಿ. ಯೋಗೇಶ್, ಉಪಕಾರ್ಯದರ್ಶಿ ಶ್ರೀಮತಿ ಜ್ಯೋತಿ, ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜಕುಮಾರ, ಉಪನಿರ್ದೇಶಕರುಗಳಾದ ಶ್ರೀ ಸುರೇಶ್ ರೆಡ್ಡಿ ಮತ್ತು ಶ್ರೀ ಪ್ರಕಾಶ್, ಸಂಶೋಧನಾಧಿಕಾರಿ ಶ್ರೀ ಎ. ರಾಜಶೇಖರ, ಸಹಾಯಕ ನಿರ್ದೇಶಕ ಶ್ರೀ ಹೆಚ್. ಶ್ರೀನಿವಾಸ, ಲೆಕ್ಕಾಧಿಕಾರಿ ಶ್ರೀ ಮಹದೇವಸ್ವಾಮಿ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಅಂತ್ಯದಲ್ಲಿ, ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕೆಲಸ ಮಾಡುವ ಅನಿವಾರ್ಯತೆಯನ್ನು ಕಾರ್ಯದರ್ಶಿಗಳು ಮನವರಿಕೆ ಮಾಡಿಕೊಟ್ಟರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles