14.7 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಒತ್ತಾಯ

ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಒತ್ತಾಯ
ಲಿಂಗಸೂಗೂರು, ಜೂನ್ 11: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಲಿಂಗಸೂಗೂರು ತಾಲೂಕು ಆರ್ಯ ಈಡಿಗ ಸಮಾಜದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ತಮ್ಮಯ್ಯ ಗುತ್ತೇದಾರ, ರಾಜ್ಯ ರಾಜಕೀಯದಲ್ಲಿ ಬೇಳೂರು ಗೋಪಾಲಕೃಷ್ಣ ಅವರು ಪಕ್ಷ ಸಂಘಟನೆ ಹಾಗೂ ಸಮಾಜದ ಅಭಿವೃದ್ಧಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿದ ಅವರು, ಪಕ್ಷದ ಬೆಳವಣಿಗೆಗೆ ಹಾಗೂ ಸಂಘಟನೆಗೆ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಮಹತ್ವದ ಜವಾಬ್ದಾರಿ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಆರ್ಯ ಈಡಿಗ ಸಮಾಜಕ್ಕೆ ರಾಜ್ಯ ರಾಜಕಾರಣದಲ್ಲಿ ಹೆಚ್ಚಿನ ಪ್ರಾತಿನಿಧ್ಯ ದೊರೆಯಬೇಕಿದ್ದು, ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜದ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಮಯ್ಯ ಗುತ್ತೇದಾರ, ಚಂದ್ರಶೇಖರ, ಶಿವಯ್ಯ ಗುತ್ತೇದಾರ, ವೀರಭದ್ರಯ್ಯ ಗುತ್ತೇದಾರ, ರಮೇಶ್ ತಿಪ್ಪಯ್ಯ, ರಮೇಶ್ ಗುತ್ತೇದಾರ, ನಾಗರಾಳ ರಮೇಶ್ ಸೇರಿದಂತೆ ಆರ್ಯ ಈಡಿಗ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles