15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಯಾದಗಿರಿ ಜಿಲ್ಲಾ ಮಟ್ಟದ : ರಾಜ್ಯ ಸರಕಾರಿ ನೌಕರರ ಕ್ರೀಡಾ ಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಹ್ವಾನ

ಯಾದಗಿರಿ ಜಿಲ್ಲಾ ಮಟ್ಟದ : ರಾಜ್ಯ ಸರಕಾರಿ ನೌಕರರ ಕ್ರೀಡಾ ಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಹ್ವಾನ

ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯಾದಗಿರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು 2026ರ ಫೆಬ್ರವರಿ 6ರ ಶುಕ್ರವಾರ ರಂದು ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

 ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸುವರು.
 ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ, ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಬಾಬುರಾವ್ ಚಿಂಚನಸೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರು ಶ್ರೀ ಶರಣಪ್ಪ ಸಲಾದಪೂರ ಅವರ ಘನ ಉಪಸ್ಥಿತಿಯಲ್ಲಿ ನೆರವೇರಲಿದೆ.

 ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು.

 ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ ಹಾಗೂ ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

 ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಭೀಮರಾಯನಗುಡಿ ಕಾಡಾ ಅಧ್ಯಕ್ಷರು ಶ್ರೀ ಬಾಬು ಹೊನ್ನಾ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ಬಾಬುರಾವ್ ಕಾಡ್ಲೂರ ಅತಿಥಿಗಳಾಗಿ ಪಾಲ್ಗೊಳ್ಳುವರು.

 ಸರ್ವರಿಗೂ ಆದರದ ಸುಸ್ವಾಗತವನ್ನು ಯಾದಗಿರಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಪೃಥ್ವಿಕ್ ಶಂಕರ್, ಯಾದಗಿರಿ ಜಿಲ್ಲಾ ಶಾಖೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷರು ರಾಯಪ್ಪಗೌಡ ಹುಡೇದ, ಯಾದಗಿರಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ರಾಜು ಬಾವಿಹಳ್ಳಿ, ಜಿಲ್ಲಾ ಗೌರವಾಧ್ಯಕ್ಷರು ಯಮರೆಡ್ಡಿ ಮುಂಡಾಸ, ಜಿಲ್ಲಾ ಕಾರ್ಯದರ್ಶಿ ಸಾಯಪ್ಪ ಚಂಡ್ರಕಿ, ಜಿಲ್ಲಾ ಖಜಾಂಚಿ ರಂಗನಾಥ ನಾಯಕ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಬಸನಗೌಡ ಪಾಟೀಲ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಬಂಗಾರಪ್ಪ, ತಾಲೂಕು ಅಧ್ಯಕ್ಷರುಗಳಾದ ಶಹಾಪೂರ ರಾಯಪ್ಪಗೌಡ, ಸುರಪುರ ಅಧ್ಯಕ್ಷರು ರಾಮಕೃಷ್ಣ ಹೆಗಡೆ, ವಿಭಾಗೀಯ ಉಪಾಧ್ಯಕ್ಷರು ಮತ್ತು ಗುರುಮಠಕಲ್ ಅಧ್ಯಕ್ಷರು ಸಂತೋಷ ನೀರೇಟಿ, ಹುಣಸಗಿ ಅಧ್ಯಕ್ಷರು ಅಮರೇಶ ಮಾಲಗತ್ತಿ, ಭೀಮರಾಯನಗುಡಿ ಯೋಜನಾ ಶಾಖೆ ಅಧ್ಯಕ್ಷರು ಭೀಮರೆಡ್ಡಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ತಾಲೂಕ ಶಾಖೆಗಳ ಸರ್ವ ಪದಾಧಿಕಾರಿಗಳು ನಿರ್ದೇಶಕರು ನಾಮ ನಿರ್ದೇಶಿತ ಸದಸ್ಯರು ಹಾಗೂ ಯಾದಗಿರಿ ಜಿಲ್ಲೆಯ ಸಮಸ್ತ ಸರಕಾರಿ ನೌಕರುಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles