17 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ರಾಜ್ಯದ ನೂತನ ಸಚಿವರಾಗಿ 19 ಶಾಸಕರಿಂದ ಸಂಪುಟ ಸೇರ್ಪಡೆ: ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಅಂತಿಮ ಗೂಂಡಿದ್ದು, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಒಟ್ಟು 19 ಮಂದಿ ಶಾಸಕರು ನೂತನ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟಕ್ಕೆ ಸೇರ್ಪಡೆಗೊಂಡಿರುವ ನೂತನ ಸಚಿವರಿಗೆ ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಸರಳ ಹಾಗೂ ಗಂಭೀರ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರತಿಜ್ಞೆ ಬೋಧಿಸಿದರು.

ವಿವಿಧ ಶಾಸಕರ ಪ್ರಮಾಣವಚನ ಸ್ವೀಕಾರದ ವೈಶಿಷ್ಟ್ಯತೆ:
ನೂತನ ಸಚಿವರು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ದೇವರ, ಧರ್ಮದ ಅಥವಾ ಮಹಾನ್ ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು:
ದೇವರ ಹೆಸರಿನಲ್ಲಿ:ಡಾ. ಅಜಯ್ ಸಿಂಗ್, ಹೆಚ್.ಸಿ. ಬಾಲಕೃಷ್ಣ, ಎನ್. ಚೆಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಬಿ. ನಾಗೇಂದ್ರ, ಹೆಚ್.ಎಂ. ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ, ರುದ್ರಪ್ಪ ಲಮಾಣಿ, ಕೆ.ಎಂ. ಶಿವಲಿಂಗೇಗೌಡ ಮತ್ತು ಶಿವರಾಜ್ ತಂಗಡಗಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಶೇಷ ವ್ಯಕ್ತಿಗಳು ಹಾಗೂ ದೈವಗಳ ಸ್ಮರಣೆ:
ಕೆ.ಎಸ್. ಬಸವಂತಪ್ಪ:ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ.
ಸಿ.ಎಂ. ನರೇಂದ್ರ ಸ್ವಾಮಿ:ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಗಂಗಾಧರಜ್ಜನ ಹೆಸರಿನಲ್ಲಿ.
ವಿಜಯಾನಂದ ಕಾಶಪ್ಪನವರ್: ಕೂಡಲ ಸಂಗಮದ ಹೆಸರು, ಪಂಚಪೀಠಾಧಿಪತಿಗಳು, ಬುದ್ಧ, ಬಸವ, ಅಂಬೇಡ್ಕರ್ ಹಾಗೂ ದೇವರ ಹೆಸರಿನಲ್ಲಿ.
ಬಿ.ಜೆಡ್. ಜಮೀರ್ ಅಹಮದ್ ಖಾನ್: ಅಲ್ಲಾ ಹಾಗೂ ತಾಯಿಯ ಹೆಸರಿನಲ್ಲಿ.
ಸಂವಿಧಾನಾತ್ಮಕ ಪ್ರತಿಜ್ಞೆ ಮಾತ್ರ: ಬಸವರಾಜ ರಾಯರೆಡ್ಡಿ, ರಿಜ್ವಾನ್ ಅರ್ಶದ್ ಮತ್ತು ಸಂತೋಷ್ ಲಾಡ್ ಅವರು ಯಾವುದೇ ದೇವರ ಅಥವಾ ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸದೆ, ಕೇವಲ ಸಂವಿಧಾನಬದ್ಧವಾದ ಪ್ರತಿಜ್ಞಾ ವಿಧಿಯನ್ನು ಮಾತ್ರ ಸ್ವೀಕರಿಸಿದರು.

ಈ ಸಮಾರಂಭದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ನೂತನ ಸಚಿವರ ಪದಗ್ರಹಣದೊಂದಿಗೆ ರಾಜ್ಯ ಸರ್ಕಾರದ ಆಡಳಿತ ಯಂತ್ರ ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles