16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ರಾಷ್ಟ್ರಪತಿಗಳಿಗೆ ಗವರ್ನರ್, ಸಿಎಂ ಬೀಳ್ಕೊಡುಗೆ

ಬೆಂಗಳೂರು, ಜು. 1:

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಬೆಂಗಳೂರಿಗೆ ಆಗಮಿದ್ದರು. ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣಿಸಿದರು.

ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಏರ್ ವೈಸ್ ಮಾರ್ಷಲ್ ಡಿ.ಎಸ್. ಡಂಗಿ, ಮೇಜರ್ ಜನರಲ್ ಮೋಹಿತ್ ಮಹೇಂದ್ರೂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles