ಮಾನ್ಯ ಪ್ರಿಯಾಂಕ್ ಖರ್ಗೆ ಅವರು ದಿನಾಂಕ 4 ಅಕ್ಟೋಬರ್ 2025ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಆರ್.ಎಸ್.ಎಸ್. ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಮೈದಾನಗಳಲ್ಲಿ ಅನುಮತಿ ಇಲ್ಲದೆ ಶಾಖೆ, ಸಾಂಘಿಕ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ಯುವಕರಲ್ಲಿ ಅಸಂವಿಧಾನಿಕ ಮತ್ತು ನಕಾರಾತ್ಮಕ ಚಿಂತನೆ ಮೂಡುತ್ತಿದೆ ಎಂದು ತಿಳಿಸಿದ್ದಾರೆ. ಈ ಪತ್ರದ ಅರ್ಥವನ್ನು ತಪ್ಪಾಗಿ ತಿರುಚಿ, ಖರ್ಗೆ ಅವರನ್ನು ಆರ್.ಎಸ್.ಎಸ್. ನಿಷೇಧಕ್ಕೆ ಕರೆ ನೀಡಿದರು ಎಂದು ಆರೋಪಿಸಿ ಬಿಜೆಪಿ ನಾಯಕರು ಮತ್ತು ಸಂಘಟಕರು ಸಚಿವರ ವಿರುದ್ಧ ಅಪಮಾನಕಾರಿ ಟೀಕೆ ನಡೆಸಿದ್ದಾರೆ.
ಇದಲ್ಲದೇ ಕೆಲವರು ದೂರವಾಣಿ ಕರೆ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿರುವ ಘಟನೆಗೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಿತ್ತಾಪೂರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯು “ಇದುವರೆಗೂ ಪೋನ್‌ನಲ್ಲಿ ಮಾತ್ರ ಬೆದರಿಕೆ ಹಾಕಲಾಗಿದೆ, ಮುಂದೆ ಮನೆಯವರೆಗೂ ಬರಬಹುದು” ಎಂಬ ಹೇಳಿಕೆ ನೀಡಿದ್ದು, ಇದು ಒಬ್ಬ ಸಚಿವರ ಜೀವಕ್ಕೆ ನೇರ ಅಪಾಯ ಉಂಟುಮಾಡುವಂತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಹಿನ್ನೆಲೆಯಲ್ಲಿ ಲಿಂಗಸುಗೂರು ಮತ್ತು ಮುದಗಲ್ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಂದ ಮಾನ್ಯ ರಾಜ್ಯಪಾಲರು ಹಾಗೂ ಕರ್ನಾಟಕ ಸರ್ಕಾರದ ಗಮನಕ್ಕೆ ಮನವಿ ಸಲ್ಲಿಸಲಾಗಿದ್ದು, ಪ್ರಿಯಾಂಕ್ ಖರ್ಗೆ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಹಾಗೂ ಜೀವ ಬೆದರಿಕೆ ಹಾಕಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.
ಪ್ರತಿಭಟನೆಯನ್ನು ಲಿಂಗಸುಗೂರು ಕ್ಷೇತ್ರದ ಮಾಜಿ ಶಾಸಕ ಡಿ.ಎಸ್. ಹೂಲಗೇರಿ ರವರ ನೇತೃತ್ವದಲ್ಲಿ ಸುಮಾರು 2000ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಜೆಲ್ಲಿ, ಲಿಂಗಸುಗೂರು ಎಪಿಎಂಸಿ ಅಧ್ಯಕ್ಷ ಅಮರೇಶ ಹಿರೇಹೆಸರೂರು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ ಗುತ್ತೆದಾರ, ಪ್ರಚಾರ ಸಮಿತಿ ಅಧ್ಯಕ್ಷ ಮಹ್ಮದ್ ರಫೀ, ಹಿರಿಯ ಮುಖಂಡ ಹೆಚ್. ಮುದಕಪ್ಪ ವಕೀಲರು, ಪದವೀಧರ ವಿಭಾಗ ಅಧ್ಯಕ್ಷ ಸಂಜೀವಪ್ಪ ಚಲುವಾದಿ, ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷ ಉಮೇಶ ಹುನ್ನಕುಂಟಿ, ಪರಿಶಿಷ್ಟ ಪಂಗಡ ವಿಭಾಗ ಅಧ್ಯಕ್ಷ ಸಂಗಮೇಶ ನಾಯಕ, ಯುವ ಕಾಂಗ್ರೆಸ್ ಅಧ್ಯಕ್ಷ ಮೌನೇಶ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೀವನಕುಮಾರ ಬಾಳೆಗೌಡ್ರು ಹಾಗೂ ಹಲವಾರು ಕಾಂಗ್ರೆಸ್ ನಾಯಕರೊಂದಿಗೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಲಿಂಗಸುಗೂರು, ಅ.24:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ರವರಿಗೆ ಆರ್.ಎಸ್.ಎಸ್. ಸಂಘಟಕರು ಹಾಗೂ ಬಿಜೆಪಿ ನಾಯಕರಿಂದ ಜೀವ ಬೆದರಿಕೆ ಮತ್ತು ಅವಾಚ್ಯ ನಿಂದನೆಗಳು ಬಂದಿರುವುದನ್ನು ಖಂಡಿಸಿ, ಲಿಂಗಸುಗೂರು ಮತ್ತು ಮುದಗಲ್ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಂದ ಭಾರಿ ಪ್ರತಿಭಟನೆ ನಡೆಸಲಾಯಿತು.