ಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಸಹಾಯಕ ನಿರ್ದೇಶಕರು ಕರ್ಣಕುಮಾರ.ಕೆ.ಚಾಮನೂರ ಜೈನಾಪೂರ ರವರು ಶೋಕ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ :: ಬೆಂಗಳೂರು ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಕರ್ಣಕುಮಾರ. ಕೆ. ಚಾಮನೂರ ಜೈನಾಪೂರ ರವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶ್ರೀಯುತರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಮಹತ್ವದ ಲೇಖಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

