15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ವಿಧಾನಸೌಧದಲ್ಲಿ ಬಿಜೆಪಿ–ಜೆಡಿಎಸ್ ಧೋರಣೆ ಖಂಡಿಸಿ ಪ್ರತಿಭಟನೆ

ಬೆಂಗಳೂರು, ಆಗಸ್ಟ್ 21: ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲು ವಿಧಾನಮಂಡಲ ಅಧಿವೇಶನದಲ್ಲಿ ಅವಕಾಶ ನೀಡದೆ, ಗದ್ದಲದ ಮೂಲಕ ಕಲಾಪದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಧೋರಣೆಯನ್ನು ಖಂಡಿಸಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಪಾಲ್ಗೊಂಡು, ಪ್ರತಿಪಕ್ಷಗಳ ಈ ಧೋರಣೆಯನ್ನು ಖಂಡಿಸಿದರು.

ರಾಜ್ಯದ ಜನರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕಾಗಿದ್ದು, ಗದ್ದಲ ಸೃಷ್ಟಿಸುವ ಮೂಲಕ ಕಲಾಪಕ್ಕೆ ಅಡ್ಡಿಪಡಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles