15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಶ್ರೀ ಪ್ರಸನ್ನಾನಂದ ಪುರಿ ಮಹಾಸಮೀಜಿ ಅವರಿಗೆ ಅನಾರೋಗ್ಯ ಹೈದರಾಬಾದನ ಅಪೋಲೋ ಆಸ್ಪತ್ರೆಗೆ ದಾಖಲು

ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಅವರಿಗೆ ಅನಾರೋಗ್ಯ: ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲು

ರಾಯಚೂರು: ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಲ್ಮೀಕಿ ಸಮಾಜದ ಕಾರ್ಯಕ್ರಮದ ನಿಮಿತ್ತ ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ, ಶ್ರೀಗಳಿಗೆ ನಿನ್ನೆ ಹೃದಯ ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ರಾಯಚೂರಿನ ವಿಜಿ ಕುಲಕರ್ಣಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ತಜ್ಞ ವೈದ್ಯರಿಂದ ಚಿಕಿತ್ಸೆ:
ಖ್ಯಾತ ವೈದ್ಯರಾದ ಡಾ. ಅಜಿತ್ ಕುಲಕರ್ಣಿ, ಡಾ. ಬಸನಗೌಡ ಪಾಟೀಲ್, ಡಾ. ಬಸವರಾಜ್ ಪಾಟೀಲ್ ಕೊಪ್ಪೂರು ಹಾಗೂ ಡಾ. ಸುರೇಶ್ ಸಗರದ ಅವರ ತಂಡ ಶ್ರೀಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿತು. ತದನಂತರ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಆತಂಕ ಬೇಡ:
ಪ್ರಸ್ತುತ ಶ್ರೀಗಳು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಭಕ್ತಾದಿಗಳು ಹಾಗೂ ಸಮಾಜದ ಬಾಂಧವರು ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ. ಶ್ರೀಗಳ ಜೊತೆಯಲ್ಲಿ ಗೌತಮ್ ಗಿಯಾ ಹಾಗೂ ಡಾ. ಹುಲಿನಾಯಕ ಅವರು ಇದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಗಣ್ಯರು ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದು, ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles