17.8 C
New York
Tuesday, September 29, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಶ್ರೀ ಮತಿ ಮಾಲ ಬಿ ನಾರಾಯಣರಾವ್,ಎಸ ಗಂಗಾಧರ ರಾಮನಗರ, ಭೀಮಣ್ಣ ಕೌಲಗಿರವರಿಗೆ ರಾಜ್ಯ ಸಚಿವ ಸ್ಥಾನಮಾನ

ಶ್ರೀ ಮತಿ ಮಾಲ ಬಿ ನಾರಾಯಣರಾವ್,ಎಸ ಗಂಗಾಧರ ರಾಮನಗರ, ಭೀಮಣ್ಣ ಕೌಲಗಿರವರಿಗೆ ರಾಜ್ಯ ಸಚಿವ ಸ್ಥಾನಮಾನ

ಬೆಂಗಳೂರು : ರಾಜ್ಯದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರ ಅಧ್ಯಕ್ಷರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ ನೀಡಿದೆ.

ಬೀದರ ಜಿಲ್ಲೆಯ ಮೀನುಗಾರಿಕೆ ನಿಗಮದ ಅಧ್ಯಕ್ಷೆ ಶ್ರೀ ಮತಿ ಮಾಲ ಬಿ ನಾರಾಯಣರಾವ್, ರಾಮನಗರ ಜಿಲ್ಲೆಯ ರೆಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ ಗಂಗಾಧರ,ವಿಜಯಪುರ ಜಿಲ್ಲೆಯ ನಿಂಬೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಭೀಮಣ್ಣ ಕೌಲಗಿ ಸೇರಿದಂತೆ ಒಟ್ಟು 54 ಮಂದಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಲಾಗಿದೆ.

ಈ ಕುರಿತು ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ಬಾಣದರಂಗಯ್ಯ ಎನ್.ಆರ್ ಅವರು, ರಾಜ್ಯದ ವಿವಿಧ ನಿಗಮ, ಮಂಡಳಿಯ ಅಧ್ಯಕ್ಷರಾದ 54 ಮಂದಿಗೆ ರಾಜ್ಯ ಸಚಿವರ ಸ್ಥಾನಮಾನಕ್ಕೆ ಅನ್ವಯಿಸುವ ಸೌಲಭ್ಯಗಳನ್ನು ಒದಗಿಸಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles