14.7 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಸಚಿವರಾಗಿ ಇಂದು ಪ್ರಮಾಣ ವಚನ: ಮುಖ್ಯಮಂತ್ರಿಯವರ ಅಧಿಕೃತ ಕರೆಯಿಂದ ಹರ್ಷಗೊಂಡ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಿವರಾಜ್ ಎಸ್. ತಂಗಡಗಿ ಅವರಿಗೆ ಸಂಪುಟ ಸೇರುವ ಅವಕಾಶ ಲಭಿಸಿದ್ದು, ಇಂದು ಅವರು ಸಚಿವರಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸೋಮವಾರದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖುದ್ದು ದೂರವಾಣಿ ಕರೆ ಮಾಡಿ, ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಲು ಆಗಮಿಸುವಂತೆ ಅಧಿಕೃತ ಆಹ್ವಾನ ನೀಡಿದರು.

ಮುಖ್ಯಮಂತ್ರಿಯವರಿಂದ ಅಧಿಕೃತ ಆಹ್ವಾನದ ಕರೆ ಬಂದ ಕೂಡಲೇ ಮಾಧ್ಯಮದವರೊಂದಿಗೆ ಮಾತನಾಡಿದ ಶಿವರಾಜ್ ಎಸ್. ತಂಗಡಗಿ ಅವರು ತಮ್ಮ ಅತೀವ ಸಂತಸವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಧನ್ಯವಾದ ಅರ್ಪಿಸಿದ ಅವರು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಹಾಗೂ ಜನಪರ ಕಾರ್ಯಗಳಿಗೆ ಮತ್ತಷ್ಟು ಬದ್ಧತೆಯಿಂದ ಶ್ರಮಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಕರೆಯು ನಾಯಕರಲ್ಲಿ ಹೊಸ ಉತ್ಸಾಹ ತಂದಿದ್ದು, ತಂಗಡಗಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಜಭವನದಲ್ಲಿ ಸಕಲ ಸಿದ್ಧತೆಗಳು ನಡೆದಿವೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles