16 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ನವೆಂಬರ್ 20ಕ್ಕೆ ಎರಡೂವರೆ ವರ್ಷ ಪೂರ್ಣಗೊಳಿಸಿದೆ. ರಾಜ್ಯದಲ್ಲಿ 2028ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಇನ್ನೂ ಸಮಯ ಇರುವಾಗಲೇ ರಾಜ್ಯದಲ್ಲಿ ಹೊಸ ಪ್ರಾದೇಶಿಕ ಪಕ್ಷವೊಂದು ಸ್ಥಾಪನೆಯಾಗಿದೆ.

ಕೇಂದ್ರದ ಮಾಜಿ ಸಚಿವ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷವನ್ನು ಸ್ಥಾಪನೆ ಮಾಡಲಾಗಿದೆ.

ಪಕ್ಷದ ಹೆಸರು ‘ನವ ಕರ್ನಾಟಕ ನಿರ್ಮಾಣ ಆಂದೋಲನ ಪಕ್ಷ’. ಈ ಪಕ್ಷಕ್ಕೆ ಕಾರ್ಯಾಧ್ಯಕ್ಷರು ಕೋಡಿಹಳ್ಳಿ ಚಂದ್ರಶೇಖರ.

ಕೋಡಿಹಳ್ಳಿ ಚಂದ್ರಶೇಖರ ಪತ್ರಿಕಾಗೋಷ್ಠಿಯಲ್ಲಿ ನವ ಕರ್ನಾಟಕ ನಿರ್ಮಾಣ ಆಂದೋಲನ ಪಕ್ಷದ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದಾರೆ. ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಪಕ್ಷವನ್ನು ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ವಿವರಗಳು: “ರಾಷ್ಟ್ರೀಯ ಪಕ್ಷಗಳ ಲೂಟಿಕೋರರಿಂದ ರಾಜ್ಯವನ್ನು ರಕ್ಷಣೆ ಮಾಡಲು, ದುರಾಡಳಿತದಿಂದ ವಿಮೋಚನೆ ಮಾಡಲು ಹೊಸ ಪ್ರಾದೇಶಿಕವನ್ನು ಕಟ್ಟಲಾಗಿದೆ” ಎಂದು ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

“ಕನ್ನಡಿಗರ ಒತ್ತಾಸೆಯಂತೆ ಚಳುವಳಿಗಾರರು ಒಂದಾಗಿ ಪ್ರಾದೇಶಿಕ ಪಕ್ಷವನ್ನು ಸ್ಥಾಪನೆ ಮಾಡಿದ್ದೇವೆ. ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ, ಅಧಿಕಾರ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಕೆಟ್ಟ ನೀತಿಗಳ ಪರಿಣಾಮ ರೈತರು, ದಲಿತು, ಕಾರ್ಮಿಕರು, ಮಹಿಳೆಯರು ಸೇರಿ ಎಲ್ಲಾ ವರ್ಗದ ಜನರು ಬೇಸತ್ತಿದ್ದಾರೆ” ಎಂದು ಆರೋಪಿಸಿದರು.

ನವ ಕರ್ನಾಟಕ ನಿರ್ಮಾಣ ಆಂದೋಲನ ಪಕ್ಷಕ್ಕೆ ಎನ್. ಮೂರ್ತಿ, ಆರ್. ಮೋಹನ್ ರಾಜ್, ಯೂನಸ್ ಖಾನ್, ಭಕ್ತರಹಳ್ಳಿ ಬೈರೇಗೌಡ, ಪಿ. ಮೂರ್ತಿ ರಾಜ್ಯ ಉಪಾಧ್ಯಕ್ಷರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಿನಾಥ್. ರಾಜ್ಯ ಕಾರ್ಯದರ್ಶಿಗಳಾಗಿ ಕೆ.ಎಂ.ರಿಸಲ್ದಾರ್, ಶೆ.ಬೋ.ರಾಧಾಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಪಕ್ಷದ ಕುರಿತು ಇಷ್ಟು ವಿವರಗಳು ಮಾತ್ರ ಲಭ್ಯವಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಆಪ್ತರಾದ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷದಲ್ಲಿದ್ದರು. ಪಕ್ಷ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಯೂ ಮಾಡಿತ್ತು.

2022ರ ಮಾರ್ಚ್ 12ರಂದು ಕಾಂಗ್ರೆಸ್ ತೊರೆದಿದ್ದ ಸಿ.ಎಂ. ಇಬ್ರಾಹಿಂ ಅವರು ಮಾರ್ಚ್ 31ರಂದು ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಜೆಡಿಎಸ್ ಪಕ್ಷವನ್ನು ಸೇರಿದ್ದರು. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿಯೂ ನೇಮಕಗೊಂಡಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಳಿಕ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದಲೂ ತಮ್ಮನ್ನು ಬಿಡುಗಡೆ ಮಾಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದರು. ಸಿ.ಎಂ.ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಹ ರಾಜೀನಾಮೆ ನೀಡಿದ್ದರು.

ಬಳಿಕ ಮಾತನಾಡಿದ್ದ ಅವರು, “ಫಲಿತಾಂಶ ಬಂದ ಮರುದಿನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸಿದೆ. ಗೌರವ ಇಲ್ಲದ ಕಡೆ ಸ್ಥಾನಕ್ಕೆ ಹೋಗಲ್ಲ, ಮಾನಕ್ಕೆ ಹೋಗುತ್ತೇವೆ. ಯು.ಟಿ.ಖಾದರ್‌ ಡಿಸಿಎಂ ಮಾಡಬಹುದಿತ್ತಲ್ಲ. ಈಗ ಅವರು ಎದ್ದೇಳುವ ಹಾಗೂ ಇಲ್ಲ, ಮಾತನಾಡುವ ಹಾಗೂ ಇಲ್ಲ” ಎಂದು ಕಾಂಗ್ರೆಸ್ ವಿರುದ್ದ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಪಕ್ಷ ಬಿಟ್ಟಾಗ ಮಾತನಾಡಿದ್ದ ಸಿ.ಎಂ.ಇಬ್ರಾಹಿಂ, “ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ಈ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ” ಎಂದು ಹೇಳಿದ್ದರು.

ಕಾಂಗ್ರೆಸ್ ತೊರೆದ ಬಳಿಕ ಸಿ.ಎಂ.ಇಬ್ರಾಹಿಂ ಜೆಡಿಎಸ್, ತೃಣಮೂಲ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಹೇಳಿದ್ದರು. “ಪ್ರಸ್ತುತ ನನ್ನ ಮುಂದೆ ಮೂರು ಆಯ್ಕೆಗಳಿವೆ, ಜೆಡಿಎಸ್, ಟಿಎಂಸಿ ಮತ್ತು ಸಮಾಜವಾದಿ ಪಕ್ಷ. ಟಿಎಂಸಿ ಮತ್ತು ಸಮಾಜವಾದಿ ಪಕ್ಷದ ಜನರು ನನ್ನನ್ನು ಸಂಪರ್ಕಿಸುತ್ತಿದ್ದಾರೆ” ಎಂದು ಹೇಳಿದ್ದರು. ಆದರೆ ಅಂತಿಮವಾಗಿ ಜೆಡಿಎಸ್ ಸೇರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles