14.5 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಸಿದ್ದರಾಮಯ್ಯ ರಕ್ಷಣೆಗೆ ನಿಂತ ಚಾಣಕ್ಯ ಯತೀಂದ್ರ: ಸಿಎಂ ಕುರ್ಚಿ ಉಳಿಸಿಕೊಳ್ಳಲು ಉತ್ತರ ಕರ್ನಾಟಕದಲ್ಲಿ ನಡೆಯುತ್ತಿದೆ ಬಿಗ್ ಗೇಮ್!

ಬೆಂಗಳೂರು: ರಾಜ್ಯ ರಾಜಕೀಯದ ಪಡಸಾಲೆಯಲ್ಲಿ ಶಾಂತವಾಗಿದ್ದ ಅಧಿಕಾರ ಹಸ್ತಾಂತರದ ಜ್ವಾಲಾಮುಖಿ ಮತ್ತೆ ಸ್ಫೋಟಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಕಾಂಗ್ರೆಸ್ ಸರ್ಕಾರದ ಒಳಾಂಗಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಕೇವಲ ಆಡಳಿತಾತ್ಮಕ ಬದಲಾವಣೆಯಲ್ಲ, ಬದಲಿಗೆ ಬಲ ಪ್ರದರ್ಶನದ ಮಹಾಯುದ್ಧವನ್ನೇ ನೆನಪಿಸುತ್ತಿವೆ.

ಒಂದು ಕಡೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಿಎಂ ಆಗುವ ಕನಸು ಚಿಗುರೊಡೆದಿದ್ದರೆ, ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಭದ್ರಪಡಿಸಲು ಅವರ ಪುತ್ರ, ಡಾ. ಯತೀಂದ್ರ ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಅಪ್ಪನ ನೆರವಿಗೆ ಬಂದ ಮತ್ತೊಬ್ಬ ಟ್ರಬಲ್‌ ಶೂಟರ್

ಸಾಮಾನ್ಯವಾಗಿ ತೆರೆಮರೆಯಲ್ಲಿ ಉಳಿಯುತ್ತಿದ್ದ ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ತಂದೆಯ ರಕ್ಷಣಾ ಕವಚವಾಗಿ ಬದಲಾಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಎಂಬ ಚರ್ಚೆ ಜೋರಾಗುತ್ತಿದ್ದಂತೆಯೇ, ಯತೀಂದ್ರ ಅವರು ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದಾರೆ. ಇದು ಕೇವಲ ಪ್ರವಾಸವಲ್ಲ, ಬದಲಿಗೆ ಅಪ್ಪನ ನಾಯಕತ್ವವನ್ನು ಗಟ್ಟಿಗೊಳಿಸುವ ಪಕ್ಕಾ ರಣತಂತ್ರ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಅವರ ಅಸಮಾಧಾನಗಳನ್ನು ಶಮನ ಮಾಡುವ ಮತ್ತು ಸಿದ್ದರಾಮಯ್ಯನವರೇ ಪೂರ್ಣಾವಧಿಗೆ ಸಿಎಂ ಆಗಿರಬೇಕು ಎಂಬ ಅಭಿಪ್ರಾಯವನ್ನು ರೂಪಿಸುವ ಗುರುತರ ಜವಾಬ್ದಾರಿಯನ್ನು ಯತೀಂದ್ರ ಹೊತ್ತುಕೊಂಡಂತಿದೆ. ಯತೀಂದ್ರ ನಡೆಸುತ್ತಿರುವ ಈ ಸೈಲೆಂಟ್ ಕ್ಯಾಂಪೇನ್ ಡಿಕೆಶಿ ಪಾಳಯದಲ್ಲಿ ನಡುಕ ಹುಟ್ಟಿಸಿರುವುದಂತೂ ಸುಳ್ಳಲ್ಲ. ಶಾಸಕರೊಂದಿಗೆ ಅವರು ನಡೆಸುತ್ತಿರುವ ನಿರಂತರ ಸಂಪರ್ಕ ಮತ್ತು ಸಂಯೋಜನೆ, ಹೈಕಮಾಂಡ್ ಮಟ್ಟದಲ್ಲಿ ಸಿದ್ದರಾಮಯ್ಯನವರ ಕೈ ಮೇಲಾಗುವಂತೆ ಮಾಡುವ ತಂತ್ರಗಾರಿಕೆಯಾಗಿದೆ.

ಇತ್ತೀಚೆಗೆ ಗದುಗಿನ ಹುಲಿಗೆಯಮ್ಮ ಆರಾಧಕಿ ಬೈಲಮ್ಮ ನುಡಿದ ಭವಿಷ್ಯ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ. ಇನ್ನೆರಡು ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಭವಿಷ್ಯವಾಣಿ ಮತ್ತು ಸಾಧು ಒಬ್ಬರು ಇದೇ ಮಾತನ್ನು ಪುನರುಚ್ಚರಿಸಿರುವುದು ಡಿಕೆಶಿ ಅಭಿಮಾನಿಗಳಲ್ಲಿ ಉತ್ಸಾಹ ತುಂಬಿದೆ.

ಇದಕ್ಕೆ ಪೂರಕ ಎಂಬಂತೆ, ಡಿಕೆ ಶಿವಕುಮಾರ್ ಕೂಡ ಸುಮ್ಮನೆ ಕುಳಿತಿಲ್ಲ. ತಮ್ಮ ಪರವಾಗಿರುವ ಶಾಸಕರನ್ನು ಒಗ್ಗೂಡಿಸುವ ಕೆಲಸದ ಜೊತೆಗೆ, ಹಿರಿಯ ನಾಯಕ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ನಡೆಸಿರುವ ಮಾತುಕತೆ ರಾಜಕೀಯ ಪಡಸಾಲೆಯಲ್ಲಿ ಸಾವಿರಾರು ಅರ್ಥಗಳನ್ನು ಹುಟ್ಟುಹಾಕಿದೆ. ಜಾರ್ಜ್ ಮತ್ತು ಡಿಕೆಶಿ ಭೇಟಿ ಕೇವಲ ಸೌಹಾರ್ದಯುತವಲ್ಲ, ಅದು ದೆಹಲಿ ಮಟ್ಟದಲ್ಲಿ ಲಾಬಿ ನಡೆಸುವ ಮುನ್ಸೂಚನೆ ಎಂಬ ಮಾತುಗಳು ಕೇಳಿಬರುತ್ತಿವೆ.

ದೆಹಲಿ ಅಂಗಳದಲ್ಲಿ ನಿರ್ಧಾರವಾಗುತ್ತಾ ಭವಿಷ್ಯ?

ರಾಜ್ಯದಲ್ಲಿ ನಡೆಯುತ್ತಿರುವ ಈ ಬಣ ರಾಜಕೀಯದ ಬಿಸಿ ದೆಹಲಿಗೆ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕ ರಾಹುಲ್ ಗಾಂಧಿ ಅವರು ಸದ್ಯದಲ್ಲೇ ಸಿಎಂ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ಮಹತ್ವದ ಚರ್ಚೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ ಹಲವು ಶಾಸಕರು ಈಗಾಗಲೇ ಖರ್ಗೆಯವರನ್ನು ಭೇಟಿಯಾಗಿ ತಮ್ಮ ನಿಲುವುಗಳನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಹೊರನೋಟಕ್ಕೆ ಉಭಯ ನಾಯಕರು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳುತ್ತಿದ್ದರೂ, ಒಳಗೊಳಗೆ ನಡೆಯುತ್ತಿರುವ ಹಗ್ಗಜಗ್ಗಾಟ ತಾರಕಕ್ಕೇರಿದೆ. ಸಿಎಂ ಕುರ್ಚಿ ಬದಲಾಗುತ್ತದೆಯಾ? ಅಥವಾ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತವಾಗಿರುತ್ತದೆಯಾ? ಎಂಬ ಪ್ರಶ್ನೆಗೆ ಉತ್ತರ ಕರ್ನಾಟಕದ ಶಾಸಕರ ನಡೆ ಮತ್ತು ಯತೀಂದ್ರ ಅವರ ಈ ಹೊಸ ರಾಜಕೀಯ ದಾಳ ನಿರ್ಣಾಯಕವಾಗಲಿದೆ.

ಒಟ್ಟಿನಲ್ಲಿ, ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಈ ಶೀತಲ ಸಮರ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಸದ್ಯಕ್ಕಂತೂ ಯತೀಂದ್ರ ರೂಪದಲ್ಲಿ ಸಿದ್ದರಾಮಯ್ಯ ಅವರಿಗೆ ಹೊಸ ಆನೆಬಲ ಬಂದಂತಾಗಿದ್ದು, ಡಿಕೆಶಿ ಪಾಳಯಕ್ಕೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಒಟ್ಟಿನಲ್ಲಿ, ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಈ ಶೀತಲ ಸಮರ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಸದ್ಯಕ್ಕಂತೂ ಯತೀಂದ್ರ ರೂಪದಲ್ಲಿ ಸಿದ್ದರಾಮಯ್ಯ ಅವರಿಗೆ ಹೊಸ ಆನೆಬಲ ಬಂದಂತಾಗಿದ್ದು, ಡಿಕೆಶಿ ಪಾಳಯಕ್ಕೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.!

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles