15.4 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಹುಬ್ಬಳ್ಳಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹುಬ್ಬಳ್ಳಿ ತಾಲೂಕಿನ ಶ್ರೀ ಸಿದ್ದೇಶ್ವರ ಕೈಲಾಸ ಮಂಟಪ ದಿನಾಂಕ :26-09- 2026 ರಂದು ಪರಮ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಯವರು & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ತಾಲೂಕ ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ನೆರವೇರಿಸಲಾಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕುಲ್ ರೋಡ್ ಹುಬ್ಬಳ್ಳಿ ಮಹಿಳಾ ಪೊಲೀಸ್ ಠಾಣೆಯ ಪೋಲಿಸ್ ಇನ್ಸಪೆಕ್ಟರ್ ಶ್ರೀಮತಿ ರತ್ನ ಎಸ್ ಭರಮಪ್ಪ ನವರು ದೀಪ ಬೆಳಗಿಸಿ ಮಹಿಳೆ ಮತ್ತು ಮಕ್ಕಳ ಸಂರಕ್ಷಣೆಗಿರುವ ಪೊಲೀಸ್ ಇಲಾಖೆ ಸೌಲಭ್ಯಗಳ ಬಗ್ಗೆ ತಿಳಿಸಿದರು .

ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಹನುಮಂತ್ ನಾಯ್ಕರವರು ಧರ್ಮವನ್ನು ನಾವು ರಕ್ಷಿಸಿದರೆ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತದೆ ಎಂದು ಹೇಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಸರ್ವತೋಮುಖ ಅಭಿವೃದ್ಧಿಗಳಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತ ರಾಷ್ಟ್ರಪತಿ ಪುರಸ್ಕೃತರು ಹಾಗೂ ನಿವೃತ್ತಿ ಶಿಕ್ಷಕರಾಗಿರುವ ಶ್ರೀಮತಿ ವೀಣಾ ಅಠವಾಲೆಯವರು ಮಹಿಳೆಯರು ಧನಾತ್ಮಕ ಮನೋಭಾವನೆಯಿಂದ ಸ್ವೇಚ್ಛೆಯಾಗಿ ಕುಟುಂಬದ ಜವಾಬ್ದಾರಿಯನ್ನು ಖುಷಿಯಿಂದ ನಿರ್ವಹಿಸಬೇಕು. ಮಹಿಳೆಯರು ಸಂಸ್ಕಾರವನ್ನು ಕಲಿತು ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕು ಎಂದು ತಿಳಿಸಿದರು. ಮಹಿಳೆಯರು ತಾಳ್ಮೆ ,ಸಹನೆ ,ಸಮಾಧಾನ ಬೆಳೆಸಿ ಕೊಳ್ಳಬೇಕು ತಾಯಿಯ ಜವಾಬ್ದಾರಿ ಅತಿ ದೊಡ್ಡದು ಜೀವನದೊಂದಿಗೆ ಕಲೆ ಮುಖ್ಯ ಎಂದು ತಿಳಿಸಿದರು.


ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ರೇಖಾ ಜಿ ಬಡಗಿಯವರು ಮಾನಸಿಕ ಅಸ್ವಸ್ಥತೆಯಿಂದ ಖಿನ್ನತೆಗೆ ಒಳಗಾದವರು ಚಿಕಿತ್ಸೆ ಪಡೆದು ಯೋಗ ಮತ್ತು ಧ್ಯಾನ ಮಾಡುವುದು ಮುಖ್ಯ. ಪ್ರಾರಂಭಿಕ ಹಂತದಲ್ಲಿಯೇ ರೋಗಗಳಿಗೆ ಚಿಕಿತ್ಸೆ ಪಡೆದುಕೊಂಡಲ್ಲಿ ಪರಿಹಾರ ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಬಾಳಮ್ಮ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಧಾರವಾಡ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾ ಭಾಸ್ಕರ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು

ಕಾರ್ಯಕ್ರಮವನ್ನು ಹುಬ್ಬಳ್ಳಿ ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಲೀಲಾಮೂರ್ತಿ ಚೌಟೇರ್‌ ರವರು ಸ್ವಾಗತಿಸಿದರು,ನವನಗರ ವಲಯದ ಮೇಲ್ವಿಚಾರಕಿ ಶ್ರೀಮತಿ ನೇತ್ರಾವತಿ ನಿರೂಪಿಸಿ. ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ರೇಣುಕಾ ವಂದಿಸಿದರು...

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles