16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಲಕ್ಷ್ಮಣ ಸವದಿ

ಅಥಣಿ: ಇತ್ತೀಚಿಗೆ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿದ ಅಥಣಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಧನಶ್ರೀ ರವೀಂದ್ರ ಗಸ್ತೆ ಅವರ ಪಾಲಕರಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಮಂಜೂರಾದ 5 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಅನ್ನು ಶಾಸಕ ಲಕ್ಷ್ಮಣ ಸವದಿ ಅವರು ಹಸ್ತಾಂತರಿಸಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಮೃತ ವಿದ್ಯಾರ್ಥಿನಿಯ ತಂದೆ-ತಾಯಿಯವರಿಗೆ ಕರೆಸಿ ಚೆಕ್ ವಿತರಿಸಿ, ಶಾಸಕರು ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಬಡ ಕುಟುಂಬದ ಆಧಾರಸ್ತಂಭವಾಗಬೇಕಿದ್ದ ಚಿಕ್ಕ ವಯಸ್ಸಿನ ವಿದ್ಯಾರ್ಥಿನಿ ಧನಶ್ರೀ ಅಕಾಲಿಕವಾಗಿ ಸಾವನ್ನಪ್ಪಿರುವುದು ಅತ್ಯಂತ ನೋವಿನ ಸಂಗತಿ. ಆಕೆಯ ಕುಟುಂಬಕ್ಕೆ ಉಂಟಾಗಿರುವ ಈ ನಷ್ಟವನ್ನು ತುಂಬಿಕೊಡಲು ಯಾರಿಂದಲೂ ಸಾಧ್ಯವಿಲ್ಲ. ಸರ್ಕಾರದ ವತಿಯಿಂದ ಮಂಜೂರಾದ ಈ ಕಿರು ಪರಿಹಾರ ಧನವು ಆ ಕುಟುಂಬಕ್ಕೆ ಸ್ವಲ್ಪ ಮಟ್ಟಿನ ಆಸರೆಯಾಗಲಿ ಎಂದು ಹಾರೈಸುತ್ತೇನೆ. ಆ ಮಗುವಿನ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಪಾಲಕರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ,” ಎಂದು ವಿಷಾದ ವ್ಯಕ್ತಪಡಿಸಿದರು.

ವರದಿ: ಯಾಸಿನ ಝಾರೆ, ಅಥಣಿ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles