14.7 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ KKRDB ಅಧ್ಯಕ್ಷ ಸ್ಥಾನ ನೀಡಲಿ

ಯುವ ಕಾಂಗ್ರೆಸ್ ಮುಖಂಡ ಧನರಾಜಗೌಡ ಎಸ್. ಪಾಟೀಲ್ ಆಗ್ರಹ

ಶಹಾಪುರ: ಶಹಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಮಾಜಿ ಸಚಿವರು ಹಾಗೂ ಹಾಲಿ ಶಹಾಪುರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ ಸ್ಥಾನವನ್ನು ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡರಾದ ಧನರಾಜಗೌಡ ಎಸ್. ಪಾಟೀಲ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶರಣಬಸಪ್ಪಗೌಡ ದರ್ಶನಾಪೂರ ಅವರು ಸಚಿವರಾಗಿ ಹಾಗೂ ಶಾಸಕರಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ, ನೀರಾವರಿ, ಶಿಕ್ಷಣ, ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಸ್ಯೆಗಳ ಕುರಿತು ನಿರಂತರವಾಗಿ ಧ್ವನಿ ಎತ್ತಿದ್ದಾರೆ. ವಿಶೇಷವಾಗಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ KKRDB ಅಧ್ಯಕ್ಷ ಸ್ಥಾನಕ್ಕೆ ಅವರಂತಹ ಅನುಭವಿ ಹಾಗೂ ಅಭಿವೃದ್ಧಿಯ ಪರವಾದ ನಾಯಕರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಧನರಾಜಗೌಡ ಎಸ್. ಪಾಟೀಲ್ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ KKRDB ಪ್ರಮುಖ ವೇದಿಕೆಯಾಗಿದ್ದು, ಈ ಭಾಗದ ಜನರ ಆಶೋತ್ತರಗಳನ್ನು ಅರಿತಿರುವ ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದರೆ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ಮುಖ್ಯಮಂತ್ರಿ ಶ್ರೀಮಾನ್ಯ ಡಿಕೆ ಶಿವಕುಮಾರ್ ಅವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಶ್ರೀ ಮಾನ್ಯ ಸಿದ್ದರಾಮಯ್ಯನವರು ಮತ್ತು ಹಿರಿಯ ಪಕ್ಷದ ಮುಖಂಡರುಗಳು ಈ ಕುರಿತು ಸೂಕ್ತವಾಗಿ ಪರಿಗಣಿಸಿ, ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ KKRDB ಅಧ್ಯಕ್ಷ ಸ್ಥಾನ ನೀಡುವ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಬೇಕು ಎಂದು ಧನರಾಜಗೌಡ ಎಸ್. ಪಾಟೀಲ್ ಒತ್ತಾಯಿಸಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles