17 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಮಾರ್ಜಾಲ ನ್ಯಾಯ- ಖಾಜಿ ನ್ಯಾಯ ಮಾಡಿದ್ದೀರಿ; ಸಂವಿಧಾನ ವಿರೋಧಿ ಕ್ರಮ:: ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ- ಎನ್ ರವಿಕುಮಾರ

ಬೆಂಗಳೂರು: ವಿಶಿಷ್ಟ ವರ್ಗವಾದ ಅಲೆಮಾರಿ ಜನಾಂಗದವರನ್ನು ಬಲಾಢ್ಯರ ಜೊತೆ ಸೇರಿಸಿದ್ದು, ಸಾಮಾಜಿಕ ಅನ್ಯಾಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ ರವಿ ಕುಮಾರ ಅವರು ವಿಶ್ಲೇಷಿಸಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸೌಲಭ್ಯ, ವಿದ್ಯೆ, ಸಂಪತ್ತು, ನೌಕರಿಯಿಂದ ವಂಚಿತವಾದ ಜನಾಂಗಕ್ಕೆ ಅವಕಾಶ ಕೊಡುವುದೇ ಒಳ ಮೀಸಲಾತಿಯ ಉದ್ದೇಶ ಎಂದು ವಿವರಿಸಿದರು. ಸರಕಾರ ಅವೆಲ್ಲವನ್ನೂ ಪರಿಗಣಿಸಿಲ್ಲ. ನ್ಯಾ.ಸದಾಶಿವ, ನ್ಯಾ. ನಾಗಮೋಹನ್‍ದಾಸ್, ಮಾಜಿ ಸಚಿವ ಮಾಧುಸ್ವಾಮಿ ವರದಿಗಳನ್ನೂ ಸರಕಾರ ಪರಿಗಣಿಸಿಲ್ಲ ಎಂದು ಟೀಕಿಸಿದರು.
ಲಂಬಾಣಿ, ಬೋವಿ, ಕೊರಚ, ಕೊರಮ ಸಮುದಾಯಕ್ಕೆ ನಾವು ಶೇ 4.5 ಕೊಟ್ಟಿದ್ದೆವು. ಅದನ್ನು ಕಡಿತಗೊಳಿಸಿದ್ದಾರೆ. ಈ ಅಲೆಮಾರಿ ಜನಾಂಗದವರಿಗೆ ಶೇ 1 ಕೊಡಲಾಗಿತ್ತು. ಅವರನ್ನು ಲೆಕ್ಕಕ್ಕೇ ತೆಗೆದುಕೊಂಡಿಲ್ಲ; ನಾವು ಯಾರಿಗೂ ಮೋಸ ಮಾಡದೆ ನ್ಯಾಯಯುತವಾಗಿ ಕೊಟ್ಟಿದ್ದಕ್ಕೆ ಅನ್ಯಾಯ ಮಾಡಿದ್ದಾರೆ ಎಂದರು. ಇವರು ಮಾರ್ಜಾಲ ನ್ಯಾಯ ಮಾಡಿದ್ದಾರೆ. ಖಾಜಿ ನ್ಯಾಯ ಮಾಡಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾದ ಕ್ರಮ ತೆಗೆದುಕೊಂಡಿದ್ದಾರೆ. ಇದನ್ನು ಸರಿಪಡಿಸಿ ಎಂದು ಆಗ್ರಹಿಸಿದರು. ಧ್ವನಿ ಇಲ್ಲದ ಅಲೆಮಾರಿ ಜನಾಂಗದವರಿಗೆ ಧ್ವನಿ ಕೊಡಿ; ಇಲ್ಲದಿದ್ದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

3 ವರ್ಗ ಮಾಡಲು ಇವರೇನು ಸರ್ವಜ್ಞರೇ?
ಇವರೇನು ಸರ್ವಜ್ಞರೇ? 2 ಗಂಟೆಗಳ ಒಳಗೆ ಯಾವ ಆಧಾರದಲ್ಲಿ 3 ವರ್ಗಗಳಾಗಿ ವಿಂಗಡಿಸಿದ್ದಾರೆ? ಏನಾದರೂ ಒಂದು ಆಧಾರ ಬೇಕಲ್ಲವೇ? ಏನು ಆಧಾರ ಎಂದು ಕೇಳಿದರು. ಜನಗಣತಿಯೇ, ಜಾತಿಗಣತಿಯೇ? ಸಾಮಾಜಿಕ, ಆರ್ಥಿಕ ಸಮೀಕ್ಷೆ ಆಧಾರವೇ? ಯಾವುದರ ಮೇಲೆ ಇದನ್ನು ಮಾಡಿದ್ದಾರೆ ಎಂದು ಸಿ.ಟಿ. ರವಿ ಅವರು ಕೇಳಿದರು.
ಅವರಿಗೆ ಖರ್ಗೆ ಸಾಹೇಬರು, ಮಹದೇವಪ್ಪ, ಆಂಜನೇಯರಿಗೆ ತೃಪ್ತಿ ಆದರೆ ಸಾಕೇ? ಯಾರೋ 4 ಜನರನ್ನು ತೃಪ್ತಿ ಪಡಿಸುವ ಕಡೆಗೆ ಅವರ ನೀತಿ ಇತ್ತೇ ಹೊರತು ಸಾಮಾಜಿಕ ನ್ಯಾಯ ಕೊಡುವ ಕಡೆ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಆಕ್ಷೇಪಿಸಿದರು. ಇವರು ಸಾಮಾಜಿಕ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. 2012ರಲ್ಲಿ ನ್ಯಾ. ಸದಾಶಿವ ಆಯೋಗ ವರದಿ ಕೊಟ್ಟಿದೆ. 6 ವರ್ಷ ಕಾಂಗ್ರೆಸ್ಸೇ ಅಧಿಕಾರದಲ್ಲಿತ್ತು. ಕುಂಡೆ ಅಡಿಗೆ ಹಾಕಿ ಕೂತಿದ್ದರು ಎಂದು ಆಕ್ಷೇಪಿಸಿದರು. 112 ಕೋಟಿ ಖರ್ಚು ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದರು.

ಇವರೇ ಬೃಹಸ್ಪತಿಗಳಿದ್ದರೆ- ಇವರಿಗೇ ಎಲ್ಲ ಗೊತ್ತಿದ್ದಿದ್ದರೆ..
ಮತ್ತೆ ಕಳೆದ 26 ತಿಂಗಳಿನಿಂದ ಕಾಂಗ್ರೆಸ್ಸೇ ಇಲ್ಲಿ ಅಧಿಕಾರದಲ್ಲಿದೆ. 26 ತಿಂಗಳಲ್ಲಿ ಸಭೆ ನಡೆಸುತ್ತ, ನೆಪ ಹೇಳುತ್ತ ಬಂದರು. ಈಗ ನ್ಯಾ. ನಾಗಮೋಹನ್‍ದಾಸ್ ವರದಿಯನ್ನೂ ಕೈ ಬಿಟ್ಟು ಸಚಿವಸಂಪುಟದ 2 ಗಂಟೆ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ಇವರೇ ಬೃಹಸ್ಪತಿಗಳಿದ್ದರೆ ಇವರಿಗೇ ಎಲ್ಲ ಗೊತ್ತಿದ್ದಿದ್ದರೆ ನ್ಯಾ. ನಾಗಮೋಹನ್‍ದಾಸ್ ವರದಿ ಯಾಕೆ ಬೇಕಿತ್ತು. ನೂರಾರು ಕೋಟಿ ಯಾಕೆ ಖರ್ಚು ಮಾಡಿದ್ದಾರೆ? ನ್ಯಾ. ಸದಾಶಿವ ಆಯೋಗ, ಮಾಜಿ ಸಚಿವ ಮಾಧುಸ್ವಾಮಿ ವರದಿಗಳು ಇವರಿಗೆ ಲೆಕ್ಕಕ್ಕೇ ಇಲ್ಲವೇ ಎಂದು ಕೇಳಿದರು. ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟು 13 ತಿಂಗಳಾಗಿದೆಯಲ್ಲವೇ? ಆ ತೀರ್ಪಿನ ಆಶಯವನ್ನೂ ಮೂಲೆಗುಂಪು ಮಾಡಿದ್ದಾರೆ. ಅದನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.
ವಿಧಾನಪರಿಷತ್ ಸಿ ಟಿ ರವಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಪಾಲ್ಗೊಂಡಿದ್ದರು.

ಮಾರ್ಜಾಲ ನ್ಯಾಯ- ಖಾಜಿ ನ್ಯಾಯ ಮಾಡಿದ್ದೀರಿ; ಸಂವಿಧಾನ ವಿರೋಧಿ ಕ್ರಮ
:: ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ- ಎನ್ ರವಿಕುಮಾರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles