14.5 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಅಂಕೋಲಾ ಹಟ್ಟಿಕೇರಿ ಟೋಲ್ ಬಳಿ ಅಕ್ರಮ ಗೋವಾ ಮದ್ಯ ಜಪ್ತಿ; ಹಾಸನ ಮೂಲದ ಆರೋಪಿ ಬಂಧನ

ಅಂಕೋಲಾ: ಇಲ್ಲಿನ ಹಟ್ಟಿಕೇರಿ ಟೋಲ್ ಗೇಟ್ ಬಳಿ ಅಬಕಾರಿ ಅಧಿಕಾರಿಗಳು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಕಾರನ್ನು ಜಪ್ತಿ ಮಾಡಲಾಗಿದೆ.

​ಬುಧವಾರ ಸಂಜೆ 6:30ರ ಸುಮಾರಿಗೆ ಅಂಕೋಲಾ ವಲಯದ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಸಿಲ್ವರ್ ಬಣ್ಣದ ಮಾರುತಿ ಸೆಲೆರಿಯೋ ಕಾರಿನಲ್ಲಿ ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕೆ ಲಭ್ಯವಿರುವ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು.
​
ಕಾರ್ಯಾಚರಣೆಯಲ್ಲಿ ಅಂದಾಜು 30,450 ರೂಪಾಯಿ ಮೌಲ್ಯದ ಒಟ್ಟು 24.550 ಲೀಟರ್ ಮದ್ಯ ಹಾಗೂ ಕೃತ್ಯಕ್ಕೆ ಬಳಸಲಾದ 5 ಲಕ್ಷ ರೂಪಾಯಿ ಮೌಲ್ಯದ ವಾಹನವನ್ನು ಅಬಕಾರಿ ನಿರೀಕ್ಷಕರು ಜಪ್ತಿ ಮಾಡಿದ್ದಾರೆ.

​ಘಟನೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ನಿವಾಸಿ ವೈ.ಬಿ. ನಟರಾಜ್ ಎಂಬುವವರನ್ನು ಬಂಧಿಸಲಾಗಿದ್ದು, ಬಿಎನ್‌ಎನ್‌ಎಸ್ (BNSS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು, ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರು ಹಾಗೂ ಕಾರವಾರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಅಂಕೋಲಾ ವಲಯದ ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles