14.6 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣಪತ್ರ;ಗ್ರಾಮ ಲೆಕ್ಕಾಧಿಕಾರಿ ಅಮಾನತು

ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣಪತ್ರ;ಗ್ರಾಮ ಲೆಕ್ಕಾಧಿಕಾರಿ ಅಮಾನತು

ಬೆಳಗಾವಿ : ರೈತರೊಬ್ಬರು ಜೀವಂತವಿದ್ದರೂ ಅವರ ಮರಣ ಪ್ರಮಾಣಪತ್ರ ನೀಡಿದ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಲೋಪ ಮಾಡಿದ ಅಧಿಕಾರಿಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಶಿವ ಸುತಗಟ್ಟಿ ಗ್ರಾಮದ ರೈತ ಈರಪ್ಪ ನಾಗಪ್ಪ ಅಬ್ಬಾಯಿ ಎಂಬುವರು ಇನ್ನೂ ಬದುಕಿದ್ದಾರೆ. ಆದರೆ, 2021ರಲ್ಲೇ ಅವರು ಮರಣ ಹೊಂದಿದ್ದಾರೆ ಎಂದು ಅವರ ದಾಖಲೆಗಳಲ್ಲಿ ದೃಢೀಕರಿಸಲಾಗಿದೆ. ಕಳೆದ ಐದು ವರ್ಷಗಳಿಂದ ರೈತನಿಗೆ ಈ ವಿಷಯ ಗೊತ್ತಿಲ್ಲದೇ ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದಾರೆ.

ಲೋಪ ಎಸಗಿದ ಸುತಗಟ್ಟಿ ಗ್ರಾಮ ಅಡಳಿತಾಧಿಕಾರಿ ನೀಲಾ ಮುರಗೋಡ, ಮುರಗೋಡ ವೃತ್ತದ ಕಂದಾಯ ನಿರೀಕ್ಷಕ ಆರ್.ಎಸ್.ಪಾಟೀಲ, ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಅವರ ಮೇಲೆ ದೂರು ದಾಖಲಿಸಿಕೊಂಡು, ವಿಚಾರಣೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles