24.4 C
New York
Wednesday, September 30, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಮಹರ್ಷಿ ಶ್ರೀ ಭಗೀರಥ ಜಯಂತಿ – ಏಪ್ರಿಲ್ 23ರಂದು ಭವ್ಯ ಆಚರಣೆಭಗೀರಥ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ಮಾಹಿತಿ

ಯಾದಗಿರಿ: ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಏಪ್ರಿಲ್ 23ರಂದು ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾ ಶ್ರೀ ಭಗೀರಥ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮಹರ್ಷಿ ಭಗೀರಥರ ಆದರ್ಶ ಜೀವನ, ತಪಸ್ಸು ಹಾಗೂ ಸಮಾಜಮುಖಿ ಸಂದೇಶಗಳನ್ನು ಜನರಿಗೆ ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭವಾಗಿ ಶಾಸ್ತ್ರಿ ವೃತ್ತ, ಸುಭಾಷ್ ವೃತ್ತಗಳ ಮೂಲಕ ಸರ್ಕಾರಿ ಪದವಿ ಮಹಾವಿದ್ಯಾಲಯದವರೆಗೆ ಸಾಗಲಿದೆ. ನಂತರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.
ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿ, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ, ಶಾಸಕ ರಾಜಾ ವೇಣುಗೋಪಾಲ ನಾಯಕ, ಶಾಸಕ ಶರಣಗೌಡ ಕಂದಕೂರ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಬಿಜೆಪಿ ಮುಖಂಡರಾದ ರಾಚಣ್ಣಗೌಡ ಮುದ್ನಾಳ ಹಾಗೂ ಮಹೇಶ್ ರೆಡ್ಡಿ ಮುದ್ನಾಳ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಉಪನ್ಯಾಸಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜಿಲ್ಲೆಯಾದ್ಯಂತ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಕೋಟಗೇರಾ, ನಿವೃತ್ತ ಪಿಎಸ್‌ಐ ಯಂಕಣ್ಣ ಶಹಾಪುರಾಕರ್, ಕೋಟಗೇರಾ ಪಿಲ್.ಡಿ.ಬ್ಯಾಂಕ್ ಅಧ್ಯಕ್ಷ ರಾಮಣ್ಣ ಬಳಿಚಕ್ರ, ಸಂಘಟನಾ ಕಾರ್ಯದರ್ಶಿಗಳಾದ ರಾಮಲಿಂಗಪ್ಪ ಯರಗೋಳ, ತಮ್ಮಣ್ಣ ಉಪ್ಪಾರ ಬಳಿಚಕ್ರ, ಉಪ್ಪಾರ ಸಮಾಜದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಶ್ವನಾಥ್ ಗುಡೂರು, ಭೀಮಷಪ್ಪ್ಪ ಕಣೇಕಲ್, ತಿಮ್ಮಣ್ಣ ಬಳಿಚಕ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles