17.8 C
New York
Tuesday, September 29, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವತಿಯಿಂದ ಕನ್ನಡದಲ್ಲಿ ಶೇ.100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ….

ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವತಿಯಿಂದ ಕನ್ನಡದಲ್ಲಿ ಶೇ.100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ….

ಮುಂಡಗೋಡ, ಜೂನ್ 12 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಮುಂಡಗೋಡದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಜಿ.ಟಿ. ಕಡೇಮನಿ ಉದ್ಘಾಟಿಸಿ ಮಾತನಾಡಿ, ಕನ್ನಡವು ಪ್ರತಿಯೊಬ್ಬರಿಗೂ ಅನ್ನ ನೀಡುವ ಭಾಷೆಯಾಗಿದ್ದು, ಎಲ್ಲರೂ ಕನ್ನಡವನ್ನು ಗೌರವಿಸಿ ಪ್ರೀತಿಸಬೇಕು ಎಂದರು. ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿದ್ದು, ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಶಿಕ್ಷಕರನ್ನು ಹಾಗೂ ಕಾರ್ಯಕ್ರಮ ಆಯೋಜಿಸಿದ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಕೆ.ಕೆ. ಕರವಿನಕೊಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು. ಕನ್ನಡ ನಾಡಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ವಿಜೇತರು ದೊರೆತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಅವರ ಕೊಡುಗೆಯನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು.
ಡಾ. ಪಿ.ಪಿ. ಚಬ್ಬಿ ಹಾಗೂ ಶ್ರೀ ಅರವಿಂದ ಗುಡಿಗೆ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಬಿ.ಎನ್. ಆಶ್ರಯ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಕನ್ನಡದ ಬೆಳವಣಿಗೆಗೆ ಶ್ರಮಿಸುತ್ತಿದೆ ಎಂದರು. ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
“ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2022ರಿಂದ ಇಲ್ಲಿಯವರೆಗೆ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು ಪರಿಷತ್ತಿನ ಹೆಮ್ಮೆಯ ಸಾಧನೆಯಾಗಿದೆ.” — ಶ್ರೀ ಬಿ.ಎನ್. ವಾಸರೆ ಜಿಲ್ಲಾಧ್ಯಕ್ಷರು
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ವಸಂತ ಎಸ್. ಕೊಣಸಾಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕನ್ನಡ ವಿಷಯದಲ್ಲಿ ಶೇ.100ಕ್ಕೆ 100 ಅಂಕ ಪಡೆದ 20 ವಿದ್ಯಾರ್ಥಿಗಳನ್ನು ಕನ್ನಡ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಎಸ್.ಡಿ. ಮುಡೆಣ್ಣವರ, ಡಾ. ರಮೇಶ್ ಅಂಬಿಗರ (ಸಮನ್ವಯಾಧಿಕಾರಿಗಳು, ಬಿಆರ್‌ಸಿ ಮುಂಡಗೋಡ), ಸುಭಾಷ್ ಡೋರಿ, ಶ್ರೀ ಪಿ.ಸಿ. ಕೇಶಪ್ಪನಟ್ಟಿ, ಅಶೋಕ್ ಶಂಕರಿಕೊಪ್ಪ, ನಾಗರಾಜ ಅರ್ಕಸಾಲಿ, ಎಂ.ಎಚ್. ಕಲಾಲ, ಎಸ್.ಬಿ. ಹೂಗಾರ್, ಚಿದಾನಂದ ಪಾಟೀಲ್, ದಿನೇಶ್ ವರ್ಣೇಕರ್, ಶಿವಾನಂದ ವಾಲಿಶೆಟ್ಟರ್, ಗಿರೀಶ್ ಕುಲಕರ್ಣಿ, ಎಸ್.ಕೆ. ಬೋರ್ಕರ್, ಆರ್.ಎಸ್. ಕಲಾಲ, ಸುಭಾಷ್ ವಡ್ಡರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ಶ್ರೀ ಎಸ್.ಡಿ. ಮುಡೆಣ್ಣವರ ಸ್ವಾಗತಿಸಿದರು, ನಾಗರಾಜ ಅರ್ಕಸಾಲಿ ವಂದಿಸಿದರು ಹಾಗೂ ಶ್ರೀ ರಮೇಶ್ ಪವಾರ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು. ಅಲ್ಲದೆ ಹಿರಿಯ ಸಾಹಿತಿ ಶ್ರೀ ಅರವಿಂದ ಗುಡವಿ ಮಳಗಿ ಅವರನ್ನು ಜಿಲ್ಲಾ ಘಟಕದ ವತಿಯಿಂದ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿ, ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿವೆ ಎಂದು ಪ್ರಶಂಸಿಸಿದರು.
“ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಉಳಿವು ಮತ್ತು ಬೆಳವಣಿಗೆಗಾಗಿ ನಿರಂತರವಾಗಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಕನ್ನಡ ಸಂಸ್ಕೃತಿಯ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡುತ್ತಿದೆ.” — ಶ್ರೀ ಜಿ.ಟಿ. ಕಡೇಮನಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ, ಮುಂಡಗೋಡ.

ವರದಿ: ಬಸಯ್ಯ ತೋಟಯ್ಯನವರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles