16.4 C
New York
Tuesday, September 29, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಗ್ರಾಮಸ್ಥರಲ್ಲಿ ಆತಂಕ

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಗ್ರಾಮಸ್ಥರಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬೆಳಿಗ್ಗೆ ಸುಮಾರು 5.10 ಗಂಟೆ ವೇಳೆಗೆ ಸಂಭವಿಸಿದ ಸ್ಫೋಟದ ತೀವ್ರತೆಗೆ ಆರೋಪಿಯ ಮನೆಯ ಹಂಚುಗಳು, ಅಡುಗೆ ಮನೆಯ ಕಿಟಕಿಯ ಗಾಜುಗಳು ಹಾಗೂ ಸುತ್ತಮುತ್ತಲಿನ ಮನೆಗಳ ಹಂಚು ಮತ್ತು ಬಾಗಿಲುಗಳು ಜಖಂಗೊಂಡಿವೆ. ಘಟನೆಯಲ್ಲಿ ಸುಮಾರು ₹1.15 ಲಕ್ಷ ಮೌಲ್ಯದ ಆಸ್ತಿ ನಷ್ಟ ಸಂಭವಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಕಾಳಗಿನಕೊಪ್ಪ ಗ್ರಾಮದ ವಸಂತ @ ವಾಸು ರಾಯಪ್ಪ ಕೊರವರ (52) ಹಾಗೂ ಅವರ ಪುತ್ರ ಮುನೇಶ್ವರ ವಸಂತ ಕೊರವರ ಅವರು ತಮ್ಮ ಮನೆಯಲ್ಲಿ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳು ಹಾಗೂ ನಾಡಬಾಂಬ್‌ಗಳನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಈ ಸ್ಫೋಟಕ ವಸ್ತುಗಳು ಸ್ಫೋಟಗೊಂಡ ಪರಿಣಾಮ ಸುತ್ತಮುತ್ತಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.

ಘಟನೆಯ ಬಳಿಕ ಮನೆಯಲ್ಲಿದ್ದ ಉಳಿದ ನಾಡಬಾಂಬ್‌ಗಳೊಂದಿಗೆ ಆರೋಪಿಯು ಸ್ಥಳದಿಂದ ಪರಾರಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯ ಸಂಬಂಧ ರೈತ ಮಾರುತಿ ಅಪ್ಪಯ್ಯ ಬಿಡದೋಳಕರ ಅವರು ನೀಡಿದ ದೂರಿನ ಆಧಾರದ ಮೇಲೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದೆ.

ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಯನ್ನು ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐ ಕುಷ್ಠಗೌಡ ಅರಕೇರಿ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles