17 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಚಾಲನೆ ನೀಡಿದ ಹಿರಿಯ ನ್ಯಾಯಾಧೀಶ ರವಿಕುಮಾರ್ ಕೆ.

ಅಥಣಿ, ಜೂ.27: ಕಾನೂನು ಸೇವೆಗಳ ಸಮಿತಿ, ಅಥಣಿ ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ, ಅಥಣಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಪಲ್ಸ್ ಪೋಲಿಯೋ ಜಾಗೃತಿ ಜಾಥೆಗೆ ಶನಿವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರವಿಕುಮಾರ ಕೆ. ಅವರು ಚಾಲನೆ ನೀಡಿ ಮಾತನಾಡಿ, ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು. ಪಲ್ಸ್ ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಕಾಳಜಿ ವಹಿಸಬೇಕು. ಆರೋಗ್ಯವಂತ ಮಕ್ಕಳೇ ದೇಶದ ಭವಿಷ್ಯವಾಗಿರುವುದರಿಂದ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಕ್ರಿಯವಾಗಿ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.

ಜಾಥಾವು ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸಿತು.

ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಓಂಕಾರಮೂರ್ತಿ, 1ನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಶ್ರೀ ರವೀಂದ್ರ ಹಾವರಗಿ, 2ನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಶ್ರೀಮತಿ ಸುನೀತಾ ಪ್ರಭನ್ನವರ, ತಾಲೂಕು ಆರೋಗ್ಯಾಧಿಕಾರಿ ಬಸಗೌಡ ಕಾಗೆ, ಸಹಾಯಕ ಸರ್ಕಾರಿ ಅಭಿಯೋಜಕ ಬಸಪ್ಪ ಕಾಂಬಳೆ, ವಕೀಲರ ಸಂಘದ ಅಧ್ಯಕ್ಷ ಎ.ಎ. ಹುದ್ದಾರ್, ಆರ್.ಪಿ. ಹಗೇದ, ಸಿ.ಕೆ. ಬಾಗಿ, ಜೆ.ಡಿ. ಹಿರೇಮಠ, ಎನ್.ಪಿ. ಬಾಬರ್, ಶ್ರೀಮತಿ ಜಿ.ಬಿ. ಕಾಂಬಳೆ, ನೌಕರರ ಸಂಘದ ಅಧ್ಯಕ್ಷ ರಾಮಗೊಂಡ ಪಾಟೀಲ, ಡಾ. ಎಂ.ಎಂ. ಮೇತ್ರಿ, ಡಾ. ಸುರೇಶ ವಾಲಿಕಾರ, ಶಂಕರ ಮಠಪತಿ, ಅರುಣ್ ಯಲಗುದ್ರಿ, ವಕೀಲರ ಸಂಘದ ಪದಾಧಿಕಾರಿಗಳು, ವೈದ್ಯರು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಮುರುಗೇಶ್ ಇಂಗಳೆ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles