16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಹೊನ್ನಾಳಿ ಅರಕೆರೆ ಗ್ರಾ.ಪಂ.ಗೆ ಈಶ್ವರ ಖಂಡ್ರೆ ಹಠಾತ್ ಭೇಟಿಕೆರೆಗೆ ನೀರು ತುಂಬಿಸಲು, ಅರ್ಹ ಫಲಾನುಭವಿಗಳಿಗೆ ವಸತಿ ಕಲ್ಪಿಸಲು ಈಶ್ವರ ಖಂಡ್ರೆ ಸೂಚನೆ

ಹೊನ್ನಾಳಿ, ಜು.1: ಹೊನ್ನಾಳಿ ತಾಲೂಕು ಅರೆಹಳ್ಳಿ ಗ್ರಾಮ ಪಂಚಾಯ್ತಿಗೆ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅವರು ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊನ್ನಾಳಿಯ ಹಿರೇಕಲ್ಮಠದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಶಾಸಕ ಶಾಂತನಗೌಡ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯ್ತಿ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ಅಧಿಕಾರಿಗಳೊಂದಿಗೆ ಅರಕೆರೆ ಗ್ರಾಮ ಪಂಚಾಯ್ತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿ, ಕೈಗೊಂಡಿರುವ ಕಾಮಗಾರಿಗಳ ಮಾಹಿತಿ ಪಡೆದರು.
ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿರುವ ಗ್ರಾಮದ ಕೆರೆ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಕೆರೆಗೆ ತಿಂಗಳೊಳಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅದೇ ವೇಳೆ ಗ್ರಾಮದಲ್ಲಿನ ಮನೆಗಳಿಗೆ ಭೇಟಿ ನೀಡಿದ ಅವರು, ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಯಡಿ ಪಕ್ಕಾ ಮನೆ ನಿರ್ಮಿಸಿಕೊಳ್ಳಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯ ಕೊರತೆಯ ನಡುವೆಯೂ ಯಾವುದೇ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಪರ್ಯಾಯ ಮೂಲಗಳಿಂದ ನೀರು ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles