16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ದೇವನೂರು: ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಅರ್ಥಪೂರ್ಣ ಆಚರಣೆ

ನಂಜನಗೂಡು:ತಾಲೂಕಿನ ದೇವನೂರು ಗ್ರಾಮದ ಸುಪ್ರಸಿದ್ಧ ಶ್ರೀ ಗುರುಮಲ್ಲೇಶ್ವರ ಮಹಾ ಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯಾರಾಧನೆ ಮಹೋತ್ಸವವು ಅತ್ಯಂತ ಭಕ್ತಿಪೂರ್ವಕ ಹಾಗೂ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಧಾರ್ಮಿಕ ಕೇಂದ್ರಗಳು ಕೇವಲ ಪೂಜಾ ಸ್ಥಳಗಳಲ್ಲ, ಅವು ಸಮಾಜದ ದಾರಿದೀಪಗಳು. ಶ್ರೀ ಗುರುಮಲ್ಲೇಶ್ವರ ಮಠವು ದಾಸೋಹ ಪರಂಪರೆಯ ಮೂಲಕ ಹಸಿದವರಿಗೆ ಅನ್ನದಾನ ಮತ್ತು ಜ್ಞಾನದಾಸೋಹದ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡುತ್ತಾ ಬಂದಿದೆ. ಇಂತಹ ಪುಣ್ಯಾರಾಧನೆಯ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಕಳಕಳಿಯನ್ನು ಮೂಡಿಸುತ್ತವೆ” ಎಂದು ಶ್ಲಾಘಿಸಿದರು.

ದಾಸೋಹ ಪರಂಪರೆ:ಮಠವು ದಶಕಗಳಿಂದಲೂ ದಾಸೋಹ ಪರಂಪರೆಯನ್ನು ಎತ್ತಿ ಹಿಡಿದಿದ್ದು, ಈ ಪುಣ್ಯಾರಾಧನೆಯ ಸಂದರ್ಭದಲ್ಲಿ ಸಾವಿರಾರು ಭಕ್ತರಿಗೆ ಅನ್ನಪ್ರಸಾದ ವಿನಿಯೋಗ ನಡೆಯಿತು.

ಗಣ್ಯರ ಉಪಸ್ಥಿತಿ:ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಗುರುಮಲ್ಲೇಶ್ವರ ಮಹಾ ಸಂಸ್ಥಾನ ದಾಸೋಹ ಮಠದ ಪೀಠಾಧಿಪತಿಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಹಿರಿಯ ನಾಯಕರಾದ ಡಾ. ಎಚ್.ಸಿ. ಮಹಾದೇವಪ್ಪ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನಾರಾಯಣ , ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಸೇರಿದಂತೆ ಹಲವು ಗಣ್ಯರು, ಜನಪ್ರತಿನಿಧಿಗಳು ಹಾಗೂ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಶ್ರೀ ಗುರುಮಲ್ಲೇಶ್ವರರ ಆಶೀರ್ವಾದ ಪಡೆದರು.

ಭಕ್ತಿ ಸಾಗರ:
ಪುಣ್ಯಾರಾಧನೆಯ ಅಂಗವಾಗಿ ಬೆಳಿಗ್ಗೆಯಿಂದಲೇ ಮಠದಲ್ಲಿ ವಿಶೇಷ ಪೂಜೆ, ಅಭಿಷೇಕ, ಮತ್ತು ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಮಠದ ಆವರಣದಲ್ಲಿ ನೆರೆದು ಭಕ್ತಿಭಾವ ಮೆರೆದರು. ದೇವನೂರಿನ ಈ ಪುಣ್ಯಕ್ಷೇತ್ರವು ಭಕ್ತರ ಪಾಲಿನ ಶ್ರದ್ಧಾಕೇಂದ್ರವಾಗಿದ್ದು, ಗುರುಮಲ್ಲೇಶ್ವರರ ಪುಣ್ಯಾರಾಧನೆಯು ಈ ಬಾರಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles