15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಅಫಜಲಪುರ ವೃತ್ತ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸ್‌ ದಾಳಿ; ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಟ್ಟೆಚ್ಚರ

ಕಲಬುರಗಿ: ಜಿಲ್ಲೆಯ ಅಫಜಲಪುರ ವೃತ್ತ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಂದು ಬೆಳಗಿನ ಜಾವ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದರು. ಅಫಜಲಪುರ ವೃತ್ತದ ಸಿಪಿಐ ಅವರ ನೇತೃತ್ವದಲ್ಲಿ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ರೌಡಿಶೀಟರ್‌ಗಳು ಹಾಗೂ ಪದೇ ಪದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಮನೆಗಳ ಮೇಲೆ ಏಕಕಾಲದಲ್ಲಿ ಆಕಸ್ಮಿಕ ದಾಳಿ ನಡೆಸಿ ಪರಿಶೀಲನೆ ಕೈಗೊಂಡರು.

ಈ ಕಾರ್ಯಾಚರಣೆಯ ಮೂಲಕ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ದುಷ್ಕರ್ಮಿಗಳ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ನಿರಂತರ ನಿಗಾ ಇಟ್ಟಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಲಾಯಿತು.

ಕಾರ್ಯಾಚರಣೆಯ ವೇಳೆ ರೌಡಿಶೀಟರ್‌ಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಪೊಲೀಸರು, ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಶಾಂತಿ ಹಾಗೂ ನೆಮ್ಮದಿಗೆ ಧಕ್ಕೆ ತರುವವರ ವಿರುದ್ಧ ಯಾವುದೇ ರೀತಿಯ ರಾಜಿ ಇಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಅಪರಾಧ ಚಟುವಟಿಕೆಗಳನ್ನು ಆರಂಭದಲ್ಲೇ ನಿಯಂತ್ರಿಸುವುದು, ಸಮಾಜದಲ್ಲಿ ಸುರಕ್ಷಿತ ವಾತಾವರಣ ನಿರ್ಮಿಸುವುದು ಹಾಗೂ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಇಂತಹ ಆಕಸ್ಮಿಕ ತಪಾಸಣೆ ಮತ್ತು ನಿಗಾ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ನಡೆಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ರೌಡಿಶೀಟರ್‌ಗಳ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದ್ದು,

ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles