15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಪೊಲೀಸ್ ಐಟಿ V2 ಡೇಟಾ ನಮೂದು ಕುರಿತು ಸಿಬ್ಬಂದಿಗೆ ತರಬೇತಿ

ಕಲಬುರಗಿ: ನಗರ ಪೊಲೀಸ್ ಆಯುಕ್ತಾಲಯದಲ್ಲಿ ಇಂದು ಪೊಲೀಸ್ ಇಲಾಖೆಯ Police IT V2 ವ್ಯವಸ್ಥೆಯಲ್ಲಿ ಮಾಹಿತಿ (ಡೇಟಾ) ನಮೂದಿಸುವ ವಿಧಾನ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಐಟಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ, Police IT V2 ಪೋರ್ಟಲ್‌ನಲ್ಲಿ ಪ್ರಕರಣಗಳು ಹಾಗೂ ಇತರೆ ಅಗತ್ಯ ಮಾಹಿತಿಯನ್ನು ನಿಖರವಾಗಿ ಮತ್ತು ಪರಿಣಾಮಕಾರಿಯಾಗಿ ದಾಖಲಿಸುವ ಕುರಿತು ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ಐಪಿಎಸ್ ಉಪ ಆಯುಕ್ತಕರು ಅಧಿಕಾರಿ ಶ್ರೀಮತಿ ಶಾಲು ಅವರು ಸಿಬ್ಬಂದಿಗೆ ತರಬೇತಿ ನೀಡಿ, ಡಿಜಿಟಲ್ ವ್ಯವಸ್ಥೆಯ ಸಮರ್ಪಕ ಬಳಕೆ, ಮಾಹಿತಿಯ ನಿಖರ ದಾಖಲೀಕರಣ ಹಾಗೂ ತಾಂತ್ರಿಕ ಅಂಶಗಳ ಬಗ್ಗೆ ವಿವರಿಸಿದರು. ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಇನ್ನಷ್ಟು ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿಸಲು ಇಂತಹ ತರಬೇತಿಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಐಟಿ ಸಿಬ್ಬಂದಿ ಉಪಸ್ಥಿತರಿದ್ದು, ತಮ್ಮ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಹಲವು ತಾಂತ್ರಿಕ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles