16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಶಿಕ್ಷಣದ ಜೊತೆಗೆ ಕ್ರೀಡೆ, ಸಂಸ್ಕೃತಿಗೂ ಆದ್ಯತೆ ನೀಡಿ: ಆಕಾಶ ನಂದಗಾಂವ

ಅಥಣಿ: ವಿದ್ಯಾರ್ಥಿಗಳು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷರಾದ ಆಕಾಶ ನಂದಗಾಂವ ಅವರು ಕರೆ ನೀಡಿದರು.

ಸ್ಥಳೀಯ ಅಥಣಿ ವಿಮೋಚನಾ ಸಂಘದ ನಿವೇದಿತಾ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ 2026-27 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶಾಲಾ ಆವರಣದಲ್ಲಿ ಅತ್ಯಂತ ಸಡಗರ ಮತ್ತು ಉತ್ಸಾಹದಿಂದ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬರುವ ದಿನಮಾನದಲ್ಲಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವುದಾಗಿ ಹೇಳಿದರು.

ಚುಟುಕು ಸಾಹಿತ್ಯ ಪರಿಷತ್‌ನ ಅಥಣಿ ತಾಲೂಕು ಅಧ್ಯಕ್ಷರಾದ ಡಾ. ಆರ್.ಎಸ್. ದೊಡ್ಡನಿಂಗಪ್ಪ ಗೋಳ ಅವರು ಅತಿಥಿಯಾಗಿ ಆಗಮಿಸಿ ಮಾತನಾಡುತ್ತಾ,ಇಂದಿನ ವಿದ್ಯಾರ್ಥಿಗಳು ಅಂಕ ಹೇರುವ ಯಂತ್ರಗಳಾಗುತ್ತಿದ್ದಾರೆ. ಆದರೆ ಇಂದಿನ ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ಎರಡು ರೀತಿಯ ಸಧೃಡತೆ ಅವಶ್ಯಕತೆ ಇದೆ.ಅಧ್ಯಯನದ ಜೊತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾ ಮನೋಭಾವ, ಸಾಂಸ್ಕೃತಿಕ ಪರಂಪರೆ ರೂಢಿಸಿಕೊಂಡು ಉತ್ತಮ ನಡವಳಿಕೆಗಳನ್ನು ತಮ್ಮ ದೈನಂದಿನ ಬದುಕಿನಲ್ಲಿ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷ ಬಡಕಂಬಿ ಅವರು ಮಾತನಾಡುತ್ತಾ, ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅವಶ್ಯಕವಾಗಿದ್ದು, ಸಂಸ್ಥೆಯು ಇದಕ್ಕೆ ಸದಾ ಬೆಂಬಲ ನೀಡಲಿದೆ.ಸುಮಾರು 56 ಪ್ರಕಾರದ 276 ಗಿಡ ಮರಗಳನ್ನು ಸಂಸ್ಥೆ ಆವರಣದಲ್ಲಿ ನೆಡಲಾಗಿದೆ.ಬರುವ ದಿನಮಾನದಲ್ಲಿ ಇನ್ನು ಹೆಚ್ಚಿನ ಗಿಡ ಮರ ನೆಟ್ಟು ಹಸಿರಿನ ಜೊತೆಗೆ ಪರಿಸರದಲ್ಲಿ ಮಕ್ಕಳ ಉತ್ತಮ ಶಿಕ್ಷಣಕ್ಕೆ ಯತ್ನಿಸಲಾಗುವುದು ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ಪಾಲಕರ ಪ್ರತಿನಿಧಿಯಾಗಿ ಶಿವಕುಮಾರ ಬಡಕಂಬಿ ಹಾಗೂ ಶಾಲೆಯ ಪ್ರಧಾನ ಗುರುಗಳಾದ ಮಲ್ಲಿಕಾರ್ಜುನ ನಿಗಡಿ ಉಪಸ್ಥಿತರಿದ್ದು ಮಾತನಾಡಿ ಕಾರ್ಯಕ್ರಮಕ್ಕೆ ಮೆರುಗು ತಂದರು.ಕಾರ್ಯಕ್ರಮದಲ್ಲಿ ವಿದ್ಯಾ ತೆವರಟ್ಟಿ, ಭಾರತಿ ಕಿಲಾರೆ,ಗೀತಾ ಕಣ್ಣೂರ, ಪೂರ್ಣಿಮಾ ಚೌಗಲಾ,ಸಮರೀನ್ ಮುಲ್ಲಾ,ಪ್ರತಿಭಾ ಸಾಗರ,
ಸನ್ಮತಿ ಸೌಂದತ್ತಿ ಪಾಲ್ಗೊಂಡಿದ್ದರು.
ಕಾರ್ಯಕ್ರಮ ನಿರೂಪಣೆ ಸುಧಾರಾಣಿ ಕೋರೆ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಸದಸ್ಯರು ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿ ಗಳು ಹಾಗೂ ದೊಡ್ಡ ಸಂಖ್ಯೆಯಲ್ಲಿ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಜರುಗಿತು. ವಿವಿಧ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ಗಣ್ಯರು ವಿತರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles